'ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ': ಕಾಂಗ್ರೆಸ್ ಸೇರಿದ ಬಿಎಸ್ ವೈ ಆಪ್ತ
ಬೆಳಗಾವಿ, ಮಾ. 16 ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಹಾಗೂ ವಿಧಾನ ಪರಿಷತ್ನ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಅವರು ಬಿಜೆಪಿ ತೊರೆದು, ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಮೋಹನ ಲಿಂಬಿಕಾಯಿ, ‘ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟಿದ ವಾತಾವರಣವಿದ್ದು, ಅಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲ. ಕೆಲವೇ ನಾಯಕರು ಎಲ್ಲ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
‘ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಸರಕಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ದೂರ ಸರಿದಿವೆ. ಹೀಗಾಗಿ, ಎಐಸಿಸಿ ಹಾಗೂ ಕೆಪಿಸಿಸಿ ತತ್ವ, ಸಿದ್ಧಾಂತಗಳನ್ನು ನಂಬಿಕೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ನಾನು ಯಾವುದೇ ಷರತ್ತು ಕಾಂಗ್ರೆಸ್ಗೆ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸೇರ್ಪಡೆಗೊಂಡಿದ್ದೇನೆ’ ಎಂದು ಮೋಹನ್ ಲಿಂಬಿಕಾಯಿ ತಿಳಿಸಿದರು.