ಪರೀಕ್ಷಾ ಭಯ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಳ್ಳಕೆರೆ, ಮಾ.16: ಪರೀಕ್ಷಾ ಭಯದಿಂದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಚಳ್ಳಕೆರೆ ನಗರದಲ್ಲಿ ವರದಿಯಾಗಿದೆ.
ಸುಶ್ಮಿತಾ(17) ಆತ್ಮಹತ್ಯೆ ಮಾಡಿ ಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಶ್ಮಿತಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ ಬಿಡುಗಡೆ
Next Story





