ಉತ್ತರಪ್ರದೇಶ: ಕೋಲ್ಡ್ ಸ್ಟೋರೇಜ್ ಮೇಲ್ಛಾವಣಿ ಕುಸಿತ, 8 ಮಂದಿ ಮೃತ್ಯು, 11 ಜನರ ರಕ್ಷಣೆ

ಸಂಭಾಲ್(ಉತ್ತರಪ್ರದೇಶ): ಉತ್ತರಪ್ರದೇಶದ ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಮೊರಾದಾಬಾದ್ ಡಿಐಜಿ ಶಲಭ್ ಮಾಥುರ್ ಎಎನ್‌ಐಗೆ ತಿಳಿಸಿದ್ದಾರೆ.
ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಇನ್ನು ಕೆಲವರು ನಾಪತ್ತೆಯಾಗಿದ್ದಾರೆ. ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ನಾವು ಅಲ್ಲಿಗೆ ತಲುಪಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಅವಶೇಷಗಳಡಿ ಸಿಲುಕಿರುವ ಜನರನ್ನು ಹುಡುಕಲು ಅಧಿಕಾರಿಗಳು ಶ್ವಾನದಳಗಳನ್ನು ಬಳಸುತ್ತಿದ್ದಾರೆ ಎಂದು ಸಂಭಾಲ್ ಡಿಎಂ ಮನೀಶ್ ಬನ್ಸಾಲ್ ಹೇಳಿದ್ದಾರೆ.
ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಭಾಲ್, ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.







