Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉರಿಗೌಡ-ನಂಜೇಗೌಡ ಸಿನೆಮಾ ಶೀರ್ಷಿಕೆ...

ಉರಿಗೌಡ-ನಂಜೇಗೌಡ ಸಿನೆಮಾ ಶೀರ್ಷಿಕೆ ನೋಂದಣಿ ಮಾಡಿದ ಮುನಿರತ್ನ: ಒಕ್ಕಲಿಗರಿಗೆ ಟಿಪ್ಪು ಕೊಲೆಯ ಕಳಂಕ ಎಂದ ಕುಮಾರಸ್ವಾಮಿ

ಸಿನಿಮಾಕ್ಕೆ ಸಿ.ಟಿ. ರವಿ ಕಥೆ ಬರೆಯುತ್ತಾರ ಎಂದು ಪ್ರಶ್ನಿಸಿದ ಮಾಜಿ ಸಿಎಂ

17 March 2023 1:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉರಿಗೌಡ-ನಂಜೇಗೌಡ ಸಿನೆಮಾ ಶೀರ್ಷಿಕೆ ನೋಂದಣಿ ಮಾಡಿದ ಮುನಿರತ್ನ: ಒಕ್ಕಲಿಗರಿಗೆ ಟಿಪ್ಪು ಕೊಲೆಯ ಕಳಂಕ ಎಂದ ಕುಮಾರಸ್ವಾಮಿ
ಸಿನಿಮಾಕ್ಕೆ ಸಿ.ಟಿ. ರವಿ ಕಥೆ ಬರೆಯುತ್ತಾರ ಎಂದು ಪ್ರಶ್ನಿಸಿದ ಮಾಜಿ ಸಿಎಂ

ಬೆಂಗಳೂರು: ಟಿಪ್ಪುವನ್ನು (Tipu) ಕೊಂದವರೆಂದು ಬಿಜೆಪಿ (BJP) ಬಿಂಬಿಸುತ್ತಿರುವ ಉರಿಗೌಡ-ನಂಜೇಗೌಡ (Uri Gowda, Nanje Gowda) ಎಂಬ ಕಾಲ್ಪನಿಕ ಪಾತ್ರಗಳ ಬಗ್ಗೆ ಚಿತ್ರ ಮಾಡಲು ಸಚಿವ ಮುನಿರತ್ನ ಅವರು ಟೈಟಲ್‌ ರಿಜಿಸ್ಟರ್‌ ಮಾಡಿಸಿದ್ದಾರೆ ಎಂದು ವರದಿಯಾಗಿದೆ.

ಈ ಚಿತ್ರಕ್ಕಾಗಿ ಎರಡು ಟೈಟಲ್ ರಿಜಿಸ್ಟರ್‌ ಮಾಡಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಶೀರ್ಷಿಕೆ ನೋಂದಣಿಗಾಗಿ ಅರ್ಜಿ ಸಲ್ಲಿಸಲಾಗಿದೆ ಎನ್ನಲಾಗಿದ್ದು,  ಇದರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ. ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ. ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಶ್ರೀ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ' ಉರಿಗೌಡ ನಂಜೇಗೌಡ ' ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ. ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ. ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಮದರಸಾಗಳು ಬಂದ್:‌ ಶಾಸಕ ಯತ್ನಾಳ್

ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ.ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ @BJP4Karnataka ಗೆ ಇರುವುದಂತೂ ಸತ್ಯ.1/11#ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿ pic.twitter.com/dnJZgHRqub

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 17, 2023

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು @BJP4Karnataka ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.3/11#ಕುಲಕ್ಕೂ_ಅಪಮಾನ_ಕುಲ_ಗುರುವಿಗೂ_ಅಪಮಾನ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 17, 2023

ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಶ್ರೀ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ' ಉರಿಗೌಡ ನಂಜೇಗೌಡ ' ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ.5/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 17, 2023

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು.7/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 17, 2023

ವಿಜ್ಞಾನ,ತಂತ್ರಜ್ಞಾನ,ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು.
ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು.9/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 17, 2023

ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ @BJP4India , @BJP4Karnataka ಬೀರುತ್ತಿರುವ ವಕ್ರದೃಷ್ಟಿ... ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ. 11/11

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 17, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X