ಮಲ್ಪೆ: ಮೀನುಗಾರಿಕಾ ಸಚಿವರಿಂದ ಮೀನುಗಾರರೊಂದಿಗೆ ಸಂವಾದ
ಉಡುಪಿ: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಕರಾವಳಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಪೂರ್ವ ನಿರ್ಧರಿಸಿದ ಸಮುದ್ರ ಮಾರ್ಗದ ಮೂಲಕ ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಆಯೋಜಿಸಿದೆ.
ಮೀನುಗಾರರು, ಕರಾವಳಿ ಸಮುದಾಯಗಳು ಮತ್ತು ಮಧ್ಯಸ್ಥಗಾರ ರೊಂದಿಗೆ ಸಂವಾದವನ್ನು ಸುಲಭಗೊಳಿಸಲು ಸರಕಾರ ಅನುಷ್ಠಾನಗೊಳಿಸುತ್ತಿ ರುವ ವಿವಿಧ ಮೀನುಗಾರಿಕೆಗೆ ಸಂಬಂಧಿತ ಯೋಜನೆಗಳು ಮತ್ತು ಕಾರ್ಯಕ್ರಮ ಗಳ ಮಾಹಿತಿಯನ್ನು ಎಲ್ಲಾ ಮೀನುಗಾರರಿಗೆ ಮುಟ್ಟಿಸಲು, ರಾಷ್ಟ್ರದ ಆಹಾರ ಭದ್ರತೆ ಮತ್ತು ಕರಾವಳಿ ಮೀನುಗಾರ ಸಮುದಾಯಗಳ ಜೀವನೋಪಾಯಕ್ಕಾಗಿ ಸಮುದ್ರ ಮೀನುಗಾರಿಕೆ ಸಂಪನ್ಮೂಲಗಳ ಬಳಕೆ ಹಾಗೂ ಸಮುದ್ರ ಪರಿಸರ ವ್ಯವಸ್ಥೆಗಳ ರಕ್ಷಣೆಯ ನಡುವೆ ಸುಸ್ಥಿರ ಸಮತೋಲನವನ್ನು ಕೇಂದ್ರೀಕರಿಸುವ ಗುರಿ ಸಾಗರ ಪರಿಕ್ರಮಕ್ಕಿದೆ.
ಸಾಗರ ಪರಿಕ್ರಮ ಕಾರ್ಯಕ್ರಮ ಸಮುದ್ರವನ್ನೊಳಗೊಂಡ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಹಂತ ಹಂತವಾಗಿ ಒಳಗೊಳ್ಳಲು ಉದ್ದೇಶಿಸಿದ್ದು, ಸರಕಾರ ಅನುಷ್ಠಾನಗೊಳಿಸುತ್ತಿರುವ ವಿವಿಧ ಫಲಾನುಭವಿ ಆಧಾರಿತ ಯೋಜನೆ ಮತ್ತು ಕಾರ್ಯಕ್ರಮಗಳ ಅರಿವು ಮತ್ತು ಉತ್ತಮ ಅಭ್ಯಾಸಗಳನ್ನು ಪ್ರದರ್ಶಿಸುವ ಮೂಲಕ ಕರಾವಳಿ ಪ್ರದೇಶಗಳಲ್ಲಿರುವ ಮೀನುಗಾರರು, ಮೀನುಗಾರ ಸಮುದಾಯಗಳು ಮತ್ತು ಪಾಲುದಾರರು ಪ್ರಯೋಜನ ಪಡೆಯಬಹುದಾಗಿದೆ.
ಸಾಗರ ಪರಿಕ್ರಮದ ಸಂದರ್ಭದಲ್ಲಿಆಯೋಜಿಸಲಾಗುತ್ತಿರುವ ಸಂವಾದ ಕಾರ್ಯಕ್ರಮಗಳು ಮೀನುಗಾರರು ಮತ್ತು ಇತರ ಮಧ್ಯಸ್ಥಗಾರರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರಧಾನ ಮಂತ್ರಿ ಮತ್ಸ್ಯಸಂಪದದಂತಹ ವಿವಿಧ ಮೀನುಗಾರಿಕೆ ಯೋಜನೆ ಮತ್ತು ಕಾರ್ಯಕ್ರಮಗಳ ಮೂಲಕ ಅವರ ಆರ್ಥಿಕ ಉನ್ನತಿಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ.
ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆ ಮೀನುಗಾರಿಕೆ ವಲಯದಲ್ಲಿ 20,050 ಕೋಟಿರೂ.ಗಳ ಅತ್ಯಧಿಕ ಅಂದಾಜು ಹೂಡಿಕೆ ಇದರ ಪ್ರಮುಖ ಯೋಜನೆಯಾಗಿದೆ. ಮೀನುಗಾರಿಕೆ ಮತ್ತು ಜಲಕೃಷಿ, ಮೂಲ ಸೌಕರ್ಯ ಅಭಿವೃದ್ಧಿ ನಿಧಿ, ಮೀನುಗಾರರು ಮತ್ತು ಮೀನುಗಾರರಿಗೆ ವಿಸ್ತರಿಸಲಾದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಸೌಲಭ್ಯಗಳ ಬಗ್ಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಲು ಉದ್ದೇಶಿಸಲಾಗಿದೆ.
ಯೋಜನೆಯ 4ನೇ ಹಂತದ ಭಾಗವಾಗಿ, ಕೇಂದ್ರ ಮೀನುಗಾರಿಕೆ ಸಚಿವರು ಮಾ.19ರಂದು ಜಿಲ್ಲೆಗೆ ಆಗಮಿಸಲಿದ್ದು, ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 11.30ರವರೆಗೆ ಮೀನುಗಾರ ರೊಂದಿಗೆ ಸಂವಾದ ಮತ್ತು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.