Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಪ್ರಚಾರ ಫಲಕ...

ಉಡುಪಿ ಜಿಲ್ಲೆಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಡಿಸಿ ಕೂರ್ಮಾರಾವ್

17 March 2023 9:35 PM IST
share
ಉಡುಪಿ ಜಿಲ್ಲೆಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಡಿಸಿ ಕೂರ್ಮಾರಾವ್

ಉಡುಪಿ : ಜಿಲ್ಲೆಯ ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ ಗಳು ಸೇರಿದಂತೆ ಎಲ್ಲಾ  ಕಾರ್ಯಕ್ರಮಗಳ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾ ಗ್ರಾಮ ಪಂಚಾಯತ್‌ನಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. 

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಯಾವುದೇ ಪ್ರಚಾರ ಫಲಕಗಳು, ಭಿತ್ತಿಪತ್ರಗಳು, ಕರಪತ್ರಗಳು, ಧ್ವನಿವರ್ಧಕಗಳ ಬಳಕೆ ಸೇರಿದಂತೆ ಯಾವುದೇ ಪ್ರಚಾರ ಕೈಗೊಳ್ಳುವ ಮುನ್ನ ನಿಗದಿತ ಪ್ರಾಧಿಕಾರದಿಂದ ಕಾನೂನಿನಡಿಯಲ್ಲಿ ಅವಶ್ಯ ವಿರುವ ಅನುಮತಿ ಪತ್ರವನ್ನು ಪಡೆದು ಕಾರ್ಯಗತ ಗೊಳಿಸಬೇಕು. ಒಂದೊಮ್ಮೆ ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಡಿ ಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಯಾವುದೇ ರೀತಿಯ ಪ್ರಚಾರ ಫಲಕಗಳು ಸೇರಿದಂತೆ ಪ್ರಚಾರ ಸಾಮಗ್ರಿ ಗಳನ್ನು ಅನುಮತಿ ಪಡೆದು ಬಳಸಿದ್ದಲ್ಲಿ, ಅನುಮತಿಯ ಕಾಲಾವಧಿ ಮುಗಿದ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದ ಅವರು ಯಾವುದೇ ಸಭೆ ಸಮಾರಂಭ, ಮೆರವಣಿಗೆ ನಡೆಸಲು ಅನುಮತಿ ತೆಗೆದುಕೊಳ್ಳುವುದು ಸಹ  ಕಡ್ಡಾಯವಾಗಿದೆ ಎಂದರು.

ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ನೊಂದಾವಣಿ ಆಗಿದೆಯೇ ಎಂಬ ಬಗ್ಗೆ ಖಚಿತಪಡಿಸಿ ಕೊಳ್ಳಬೇಕು. ಹೆಸರು ಬಿಟ್ಟು ಹೋದಲ್ಲಿ ಕೂಡಲೇ ಹೆಸರು ನೊಂದಾಯಿಸಿ ಕೊಳ್ಳಬೇಕು. ಮುಂದಿನ ವಾರದಲ್ಲಿ ಬಿ.ಎಲ್.ಓ ಗಳು ಹಾಗೂ ಚುನಾವಣಾ ಏಜೆಂಟರುಗಳು ಮತಗಟ್ಟೆ ಕೇಂದ್ರಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಯಾವುದೇ ರೀತಿ ಗೊಂದಲಗಳಿದ್ದಲ್ಲಿ  ಚುನಾವಣಾಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು.

ಪ್ರತಿ ಮತದಾನದ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿ ಒಂದೊಮ್ಮೆ ಯಾವುದೇ ಸೌಕರ್ಯಗಳ ಕೊರತೆ ಕಂಡುಬಂದಲ್ಲಿ ಚುನಾವಣಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು. ಈ ಬಾರಿ ವಿಶೇಷವಾಗಿ 80 ವರ್ಷ ಮೇಲ್ಪಟ್ಟವರು ಮತ್ತು ವಿಶೇಷ ಚೇತನರಿಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ, ತಾಲೂಕು ಚುನಾವಣಾ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
Next Story
X