ಕಣಚೂರು ವೈದ್ಯಕೀಯ ಸಂಸ್ಥೆಯಲ್ಲಿ ‘ಮಂಗಳೂರು ಪೆಡಿಕಾನ್ ಸಮ್ಮೇಳನ

ಮಂಗಳೂರು, ಮಾ.17: ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ನೇತೃತ್ವದಲ್ಲಿ ಮಾ. 18 ಮತ್ತು 19ರಂದು ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ಸ್ (ಐಎಪಿ) ಜಿಲ್ಲಾ ಶಾಖೆಯ ವಾರ್ಷಿಕ ಸಮ್ಮೇಳನ ‘ಮಂಗಳೂರು ಪೆಡಿಕಾನ್ 2023ನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಶಾಖೆಯ ಅಧ್ಯಕ್ಷ ಡಾ. ಶಂಶಾದ್ ಖಾನ್ ತಿಳಿಸಿದರು.
ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಮಾ. 18ರಂದು ಬೆಳಿಗ್ಗೆ 11 ಗಂಟೆಗೆ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಕಾರ್ಯಕ್ರಮವನ್ನು ಉದ್ಘಾಟಿಸುವರು. ‘ಸೋಂಕಿನಿಂದ ಚುಚ್ಚು ಮದ್ದಿನವರೆಗೆ ಎಂಬ ಕುರಿತು ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕಡೆಗಳ ಸುಮಾರು 300 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಕೇಂದ್ರ ಐಎಪಿ ಅಧ್ಯಕ್ಷ ಡಾ. ಬಸವರಾಜ ಜಿ.ವಿ, ಐಎಪಿ ಸಾಂಕ್ರಾಮಿಕ ರೋಗಗಳ ಅಧ್ಯಾಯದ ರಾಷ್ಟ್ರೀಯ ಅಧ್ಯಕ್ಷ ಡಾ. ವಸಂತ ಖಲಟ್ಕರ್, ಐಎಪಿಯ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಾ. ಶರಣಗೌಡ ಪಾಟೀಲ ಭಾಗವಹಿಸುವರು ಎಂದು ಹೇಳಿದರು.
ಸಂಘದ ಪದಾಧಿಕಾರಿಗಳಾದ ಡಾ. ಶ್ರೀಕೃಷ್ಣ, ಡಾ. ವರ್ಷ, ಡಾ. ನೂರುಲ್ಲಾ, ಡಾ. ಓನಿಯೆಲ್ ಸುದ್ದಿಗೋಷ್ಠಿಯಲ್ಲಿ ಫೆರ್ನಾಂಡಿಸ್ ಉಪಸ್ಥಿತರಿದ್ದರು.