ಬ್ಯಾನರ್ ವಿಚಾರಕ್ಕೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ
ಬೆಂಗಳೂರು: ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ನಡುವೆ ಗಲಾಟೆ ನಡೆದಿರುವ ಘಟನೆ ಇಲ್ಲಿನ ವಿಜಯನಗರದ ಎಂ.ಸಿ. ಲೇಔಟ್‍ನ ಬಿಜಿಎಸ್ ಆಟದ ಮೈದಾನದಲ್ಲಿ ನಡೆದಿದೆ.
ನಾಳೆ(ಮಾ.19)ರಂದು ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಅನುಮತಿ ಪಡೆದು ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗುತಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದಾಗ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ ಎನ್ನಲಾಗಿದೆ.
ಕಾಂಗ್ರೆಸ್‍ನ ಮಾಜಿ ಶಾಸಕ ಪ್ರಿಯಾಕೃಷ್ಣ ಬೆಂಬಲಿಗರಿಂದ ಸಚಿವ ವಿಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಗಾಯಾಳುಗಳಿಗೆ ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಇದನ್ನೂ ಓದಿ: ಮಹಿಳೆಯೋರ್ವರು ಅಳುತ್ತಿದ್ದರೂ ನಿರ್ಲಕ್ಷಿಸಿ ತೆರಳಿದ ಸಿಎಂ ಬೊಮ್ಮಾಯಿ: ಕಾಂಗ್ರೆಸ್ ಆರೋಪ
Next Story