ಚುನಾವಣೆ ಬಹಿಷ್ಕಾರಕ್ಕೆ ಮಡಿಕೇರಿಯ ಇಂದಿರಾನಗರ ನಿವಾಸಿಗಳ ನಿರ್ಧಾರ

ಮಡಿಕೇರಿ: ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮಡಿಕೇರಿ ನಗರಸಭಾ ವ್ಯಾಪ್ತಿಯ ಇಂದಿರಾನಗರ ಬಡಾವಣೆಯ ನಿವಾಸಿಗಳು ನಿರ್ಧರಿಸಿದ್ದಾರೆ.
ನಗರಸಭೆಯ ನಿರ್ಲಕ್ಷ್ಯದಿಂದ ಬಡಾವಣೆಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆಯ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಅನುದಾನವನ್ನು ರದ್ದುಗೊಳಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಳೆಗಾಲ ಸಮೀಪಿಸುತ್ತಿದ್ದು, ರಸ್ತೆ ಕಾಮಗಾರಿಗೆ ಇನ್ನೂ ಕೂಡ ಚಾಲನೆ ನೀಡಿಲ್ಲ. ಕಾಮಗಾರಿ ನಡೆಯುವ ಬಗ್ಗೆ ಸಂಶಯವಿದ್ದು, ಈ ಬಾರಿ ನಾವು ಮತದಾನ ಮಾಡುವುದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Next Story





