ಮಾ.19ರಂದು ಗ್ಯಾರೇಜ್ ಮಾಲಕರ ಸಮಾವೇಶ

ಉಡುಪಿ, ಮಾ.18: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಉಡುಪಿ ವಲಯ ಇದರ ವಾರ್ಷಿಕ ಮಹಾಸಭೆ ಮತ್ತು ಸಮಾವೇಶವು ಮಾ.19ರಂದು ಬೆಳಿಗ್ಗೆ 9 ಗಂಟೆಗೆ ಉಡುಪಿ ಪುರಭವನದಲ್ಲಿ ಆಯೋಜಿಸಲಾಗಿದೆ.
ಶಾಸಕರಾದ ರಘುಪತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್ ಮತ್ತು ವಿನಯಕುಮಾರ್ ಸೊರಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ನಿವೃತ್ತ ಅಧಿಕಾರಿ ರಘು ಶ್ರೀನಿವಾಸ್ ಶೆಟ್ಟಿಗಾರ್ ಅಸಂಘಟಿತ ಕಾರ್ಮಿಕರು ಮತ್ತು ಸರಕಾರಿ ಸೌಲಭ್ಯತೆಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿರುವರು ಎಂದು ಸಂಘದ ಅಧ್ಯಕ್ಷ ರೋಶನ್ ಕರ್ಕಡ ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





