ಬ್ಯಾನರ್ ವಿಚಾರಕ್ಕೆ ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ: ಮೂರು ಪ್ರತ್ಯೇಕ ಎಫ್‍ಐಆರ್ ದಾಖಲು

ಬೆಂಗಳೂರು: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಮಾರಾಮಾರಿ ಸಂಬಂಧ ಗೋವಿಂದರಾಜ ನಗರ ಠಾಣೆಯಲ್ಲಿ ಒಟ್ಟು ಮೂರು ಪ್ರತ್ಯೇಕ ಎಫ್‍ಐಆರ್ ದಾಖಲಾಗಿವೆ.
ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಕಾರ್ಯಕರ್ತರು ನೀಡಿರುವ ದೂರು- ಪ್ರತಿದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮತ್ತೊಂದೆಡೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ 36 ಜನರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದರ ಜೊತೆಗೆ, ಕಾಂಗ್ರೆಸ್ ಕಾರ್ಯಕರ್ತೆ ನೀಡಿರುವ ದೂರಿನ ಅನ್ವಯ 10 ಜನರ ವಿರುದ್ಧ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಪ್ರತಿಯಾಗಿ ಬಿಜೆಪಿ ಕಾರ್ಯಕರ್ತೆ ಸಹ ದೂರು ನೀಡಿದ್ದು, ಅದರನ್ವಯ 8 ಜನರ ವಿರುದ್ಧ ಹಲ್ಲೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.
ಬ್ಯಾನರ್ ಕಟ್ಟುವ ವಿಚಾರಕ್ಕೆ ಶುಕ್ರವಾರ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಬಿಜಿಎಸ್ ಮೈದಾನದಲ್ಲಿ ಮಾರಾಮಾರಿ ನಡೆದಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದರು.
Next Story