ಉಡುಪಿ ಜಿಲ್ಲೆಗೆ ಆಗಮಿಸಿದ ವಿದೇಶಾಂಗ ಸಚಿವ ಎಸ್.ಜೈಶಂಕರ್‌ಗೆ ಸ್ವಾಗತ

ಉಡುಪಿ, ಮಾ.18: ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ಇಂದು ರಾತ್ರಿ ಮಣಿಪಾಲಕ್ಕೆ ಆಗಮಿಸಿದರು.
ಸಚಿವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಬುದ್ಧರ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಪಾಂಡುರಂಗ ಲಾಗ್ವನಕರ್ ಮತ್ತಿತರರು ಉಪಸ್ಥಿತರಿದ್ದರು.
Next Story