ಶಿವಮೊಗ್ಗ: ಡಿಸಿ ಕಚೇರಿ ಎದುರು ಪ್ರತಿಭಟನೆ ವೇಳೆ ಅಝಾನ್ ಕೂಗಿದ ಯುವಕನ ವಿರುದ್ಧ ದೂರು ದಾಖಲು
ಕೆ.ಎಸ್. ಈಶ್ವರಪ್ಪ ಹೇಳಿಕೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ

ಕೆ.ಎಸ್. ಈಶ್ವರಪ್ಪ ಹೇಳಿಕೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ
ಶಿವಮೊಗ್ಗ, ಮಾ.19: ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಅಝಾನ್ ಕೂಗಿದ ಆರೋಪದ ಮೇಲೆ ಯುವಕನೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಝಾನ್ ಕುರಿತು ನೀಡಿದ್ದ ಹೇಳಿಕೆ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಮ್ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಕಳೆದ 17ರಂದು ನಡೆದಿದ್ದ ಪ್ರತಿಭಟನೆ ವೇಳೆ ಯುವಕನೊಬ್ಬ ಅಝಾನ್ ಕೂಗಿದ್ದಾನೆ. ಯುವಕನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
'ಘಟನೆ ಸಂಬಂಧ ಅಝಾನ್ ಕೂಗಿದ ಯುವಕನನ್ನ ಕರೆದು ಎಚ್ಚರಿಕೆ ನೀಡಲಾಗಿದೆ ಹಾಗೂ ಈ ಸಂಬಂಧ ಕೇಸ್ವೊಂದನ್ನ ದಾಖಲಿಸಲಾಗಿದೆ' ಎಂದು ತಿಳಿಸಿದ್ದಾರೆ.
Next Story