Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಘೋಷಿತ ದೇವಮಾನವ ಧೀರೇಂದ್ರ ಕೃಷ್ಣ...

ಸ್ವಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಕಾರ್ಯಕ್ರಮದಲ್ಲಿ 36 ಮಂದಿಯ ಚಿನ್ನಾಭರಣ ಕಳವು

20 March 2023 12:02 PM IST
share
ಸ್ವಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಕಾರ್ಯಕ್ರಮದಲ್ಲಿ 36 ಮಂದಿಯ ಚಿನ್ನಾಭರಣ ಕಳವು

ಮುಂಬೈ: ಸ್ವಯಂಘೋಷಿತ ದೇವಮಾನವ ಧೀರೇಂದ್ರ ಕೃಷ್ಣ ಅವರು ಮೀರಾ ರಸ್ತೆಯಲ್ಲಿನ ಸಲಸರ್ ಕೇಂದ್ರ ಉದ್ಯಾನವನದಲ್ಲಿ ಶನಿವಾರದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಕ್ರಮದಲ್ಲಿ ಅವರ 36 ಹಿಂಬಾಲಕರ ಚಿನ್ನಾಭರಣಗಳು ಕಳವಾಗಿರುವ ಘಟನೆ ನಡೆದಿದೆ ಎಂದು hindustantimes.com ವರದಿ ಮಾಡಿದೆ.

ಕಳವಾಗಿರುವ ಚಿನ್ನಾಭರಣಗಳ ಮೌಲ್ಯ ತೀರಾ ದುಬಾರಿಯಾಗಿದ್ದು, ಅವುಗಳ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಮೀರಾ ರಸ್ತೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ನೆರೆದಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲುಂಟಾಗಿ, ಓರ್ವ ಮಹಿಳೆ ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ ಜನಸಂದಣಿಯನ್ನು ನಿಭಾಯಿಸುವಲ್ಲಿ ವಿಫಲವಾಗಿರುವುದರಿಂದ ಇಂತಹ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇದರ ಬೆನ್ನಿಗೇ ರವಿವಾರದ ಕಾರ್ಯಕ್ರಮಕ್ಕೆ ಪೊಲೀಸರು ಪ್ರವೇಶ ದ್ವಾರಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದರು. ಕಾರ್ಯಕ್ರಮದ ಸ್ಥಳದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉದ್ಭವವಾಗಿತ್ತು. ಹೀಗಿದ್ದೂ, ಅಲ್ಲಿ ನೆರೆದಿದ್ದ ಜನರಿಗೆ ಯಾವುದೇ ಗಂಭೀರ ಗಾಯಗಳಾಗದಂತೆ ಅವರ ಗಮನವನ್ನು ಬೇರೆಡೆಗೆ ತಿರುಗಿಸುವಲ್ಲಿ ಯಶಸ್ವಿಯಾದೆವು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಚಿನ್ನಾಭರಣ ಕಳವು ಕುರಿತು ದೂರು ದಾಖಲಿಸಿರುವವರ ಪೈಕಿ ಒಬ್ಬರಾದ ಮೀರಾ ರಸ್ತೆಯ ನಿವಾಸಿ ಸುನೀತಾ ಗೌಳಿ, "ನನ್ನ ಎರಡು ವರ್ಷದ ಮಗು ಹಲವಾರು ದಿನಗಳಿಂದ ಅಸ್ವಸ್ಥಗೊಂಡಿತ್ತು. ನಾನು ಶಾಸ್ತ್ರಿಯವರ ಕಾಯಿಲೆಗಳನ್ನು ತಪಾಸಣೆ ಮಾಡಿ ಗುಣಪಡಿಸುವ ಹಲವಾರು ವಿಡಿಯೊಗಳನ್ನು ನನ್ನ ಮೊಬೈಲ್‌ನಲ್ಲಿ ನೋಡಿದ್ದೆ. ಹೀಗಾಗಿ ನನ್ನ ಮಗಳ ಹೆಸರನ್ನು ಚೀಟಿಯಲ್ಲಿ ಬರೆಯಲು ನಿರ್ಧರಿಸಿದೆ. ನಾನು ನನ್ನ ಮಗಳ ಹೆಸರನ್ನು ಬಾಬಾ ಆಯ್ಕೆ ಮಾಡಿ, ಆಕೆಯ ಕಾಯಿಲೆಯನ್ನು ಗುಣಪಡಿಸುತ್ತಾರೆ ಎಂಬ ವಿಶ್ವಾಸ ಹೊಂದಿದ್ದೆ. ಅದರ ಬದಲು ನನ್ನ ಬಳಿಯಿದ್ದ ಒಂದೇ ಒಂದು ಚಿನ್ನಾಭರಣವಾದ ತಾಳಿಯ ಕಳವಾಗಿದೆ" ಎಂದು ಹೇಳಿದ್ದಾರೆ.

ಘಟನೆಯ ಕುರಿತು ಸಂಘಟಕರು ಈವರೆಗೆ ಯಾವುದೇ ವಿವರಣೆ ನೀಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಮೀರಾ ರಸ್ತೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು, "ನಾವು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಶಂಕಿತರಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ನಾವು ಕಳವು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ" ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಶಾಂತಾಬೆನ್ ಮೀಠಾಲಾಲ್ ಜೈನ್ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಕೆಲವು ಮೂಢನಂಬಿಕೆ ವಿರೋಧಿ ಸಂಘಟನೆಗಳು ವಿರೋಧಿಸಿದ್ದವು. ಈ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಈ ಸಂಘಟನೆಗಳ ಗುಂಪು ಶುಕ್ರವಾರ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಿದ್ದವು.

share
Next Story
X