ಹೃದಯಾಘಾತದಿಂದ ಕರ್ತವ್ಯ ನಿರತ ಎಎಸ್ಸೈ ನಿಧನ

ಬೆಂಗಳೂರು, ಮಾ. 20: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಪೊಲೀಸ್ ಇಲಾಖೆಯ ಎಎಸ್ಸೈಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಜಿಗಣಿ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಎಎಸ್ಸೈ ಜೆ.ಶ್ರೀನಿವಾಸ್ (60) ಎಂಬುವರು ಹೃದಯಾಘಾತದಿಂದ ಸೋಮವಾರ ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ರವಿವಾರ ಸಂಜೆ ಇಲ್ಲಿನ ಜಿಗಣಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಅವರು ಬನ್ನೇರುಘಟ್ಟ-ಜಿಗಣಿ ಮುಖ್ಯರಸ್ತೆಯ ಕೊಪ್ಪಗೇಟ್ ಬಿಟ್ಟು ಜಿಗಣಿ ಕಡೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ರಕ್ತದೊತ್ತಡಹೆಚ್ಚಾಗಿ ಕೆಳಗೆಬಿದ್ದಿದ್ದರು. ಪರಿಣಾಮ ಭುಜಕ್ಕೆ ಗಾಯವಾಗಿತ್ತು. ಕೂಡಲೇ ಜಿಗಣಿ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಮುಂಜಾನೆ ಚಿಕಿತ್ಸೆ ಫಲಕಾರಿಯಾದೇ ಕೊನೆಯುಸಿರೆಳೆದರುಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
Next Story