Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮತ ಬ್ಯಾಂಕಿಗಾಗಿ ಧರ್ಮ, ಜಾತಿ ಆಧಾರದಲ್ಲಿ...

ಮತ ಬ್ಯಾಂಕಿಗಾಗಿ ಧರ್ಮ, ಜಾತಿ ಆಧಾರದಲ್ಲಿ ಬಿಜೆಪಿ ರಾಜಕೀಯ: ಪ್ರತಿಭಾ ಕುಳಾಯಿ ಆರೋಪ

20 March 2023 2:18 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮತ ಬ್ಯಾಂಕಿಗಾಗಿ ಧರ್ಮ, ಜಾತಿ ಆಧಾರದಲ್ಲಿ ಬಿಜೆಪಿ ರಾಜಕೀಯ: ಪ್ರತಿಭಾ ಕುಳಾಯಿ ಆರೋಪ

ಕುಂದಾಪುರ : ಬಿಜೆಪಿ ಮತ ಬ್ಯಾಂಕಿಗಾಗಿ ಧರ್ಮ, ಜಾತಿ ಆಧಾರ ದಲ್ಲಿ ರಾಜಕೀಯ ಮಾಡುತ್ತಿದೆ. ಹಿಂದುತ್ವದ ಹೆಸರಿನಲ್ಲಿ ಹಿಜಾಬ್, ಹಲಾಲ್ ಎಂದು ಆತಂಕ ಸೃಷ್ಟಿಸಿ ಮತ ಪಡೆಯುವು ಹುನ್ನಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಆರೋಪಿಸಿದ್ದಾರೆ.

ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರದ ವತಿಯಿಂದ ರವಿವಾರ ಕೋಟೇಶ್ವರ ಸಮೀಪದ ಅಂಕದಕಟ್ಟೆ ಸಹನಾ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡುತಿದ್ದರು.

ಓಟ್ ಬ್ಯಾಂಕಿಗಾಗಿ ನಡೆಯುತ್ತಿರುವ ಕೋಮು ಗಲಭೆಯಲ್ಲಿ ನಾಯಕರ ಮಕ್ಕಳಿಗೆ ಸಮಸ್ಯೆಯಿಲ್ಲ. ಬದಲಾಗಿ ಬಡವರ ಮನೆ ಮಕ್ಕಳು ಬೀದಿಯಲ್ಲಿ ಸಾಯುತ್ತಿದ್ದಾರೆ. ಸಾಯುವ ಮನಸ್ಸಿದ್ದರೆ ಬಿಜೆಪಿ ಪಕ್ಷಕ್ಕೆ ಮತ ಹಾಕಿ ಎಂಬ ಕಾಲ ಬಂದಿದೆ. ಬಿಜೆಪಿ ಶವ ರಾಜಕೀಯ ಮಾಡುತ್ತಾ ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ. ಪ್ರತಿ ಚುನಾವಣೆಗಳು ಬಂದಾಗ ಕೊಲೆಗಳು ನಡೆಯುತ್ತವೆ. ಬೇಟಿ ಬಚಾವೋ, ಬೇಟಿ ಪಡಾವೋ ಕೇವಲ ಹೇಳಿಕೆಗೆ ಸೀಮಿತವಾಗಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಡಬ್ಬಲ್ ಇಂಜಿನ್ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಅವರು ದೂರಿದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ, ಬಿಜೆಪಿ ಅಧಿಕಾರ ಕ್ಕಾಗಿ ಬಡವರು, ದಲಿತರು, ಹಿಂದುಳಿದ ಸಮುದಾಯದವರ ಮನೆ ಮಕ್ಕಳನ್ನು ಬೀದಿಗಿಳಿಸಿ ಅವರ ಸಾವಿನ ಮೇಲೆ ರಾಜಕಾರಣ ಮಾಡುತ್ತಿದೆ. ಜಾತಿ-ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸ ಬಿಜೆಪಿ ಮಾಡುತ್ತಿದೆ. ಶಾಂತಿ, ಸುವ್ಯವಸ್ಥೆ, ಸಹಬಾಳ್ವೆ ಜೀವನ ನಡೆಸಲು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಆಶಯಗಳನ್ನು ಅರಿಯಬೇಕು ಎಂದರು.

ಸಮಾವೇಶವನ್ನು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಉದ್ಘಾಟಿಸಿದರು. ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಪೂಜಾರಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟ ಬ್ಲಾಕ್ ಅಧ್ಯಕ್ಷ ಶಂಕರ್ ಕುಂದರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ ಹೆಗ್ಡೆ,  ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಶ್ಯಾಮಲಾ ಭಂಡಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಅಶೋಕ್ ಪೂಜಾರಿ ಬೀಜಾಡಿ, ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಸತೀಶ್ ಕಿಣಿ ಬೆಳ್ವೆ, ಕೆದೂರು ಸದಾನಂದ ಶೆಟ್ಟಿ, ಕೃಷ್ಣದೇವ ಕಾರಂತ, ಪುರಸಭೆ ಸದಸ್ಯರಾದ ಪ್ರಭಾವತಿ ಶೆಟ್ಟಿ, ಲಕ್ಷ್ಮೀಬಾಯಿ, ಶ್ರೀಧರ ಶೇರುಗಾರ, ಚಂದ್ರಶೇಖರ್ ಖಾರ್ವಿ ಉಪಸ್ಥಿತರಿದ್ದರು.

ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರತಿನಿಧಿ ಜ್ಯೋತಿ ಪುತ್ರನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ ಸ್ವಾಗತಿಸಿದರು. ಅಕ್ಷಯ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು. ಆಶಾ ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X