ಬೈಂದೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸ್ಥಳದಲ್ಲೇ ಮೃತ್ಯು

ಬೈಂದೂರು : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಾ.18ರಂದು ಸಂಜೆ ವೇಳೆ ನಾವುಂದ ಗ್ರಾಮದ ಮಸ್ಕಿ ಎಂಬಲ್ಲಿ ನಡೆದಿದೆ.
ಅಜ್ಮೀರ್ ಜಂಕ್ಷನ್ನಿಂದ ಎರ್ನಾಕುಲಂಗೆ ಹೋಗುವ ಮರುಸಾಗರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ವ್ಯಕ್ತಿ ರೈಲಿನಿಂದ ಆಕಸ್ಮಿಕವಾ ಬಿದ್ದು, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹವು ಮಾ.19ರಂದು ಬೆಳಗ್ಗೆ ಪತ್ತೆಯಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story