ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಹೆಬ್ರಿ : ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹೆಬ್ರಿ ಗ್ರಾಮದ ಬಚ್ಚಪ್ಪುನಿವಾಸಿ ಕಾಳು ಹಾಂಡ ಎಂಬವರ ಮಗಳು ಗೀತಾ (37) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.19ರಂದು ಮಧ್ಯಾಹ್ನ ವೇಳೆ ಮನೆಯ ಒಳಗಿನ ಚಾವಡಿಯ ಮೇಲಿನ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ವೈಯಕ್ತಿಕ ಕಾರಣದಿಂದ ಮನನೊಂದ ಕಾಳಾವರ ಗ್ರಾಮದ ಸಳ್ವಾಡಿ ನಿವಾಸಿ ರಾಜು (45) ಎಂಬವರು ಮನೆ ಸಮೀಪದ ಹಾಡಿಯಲ್ಲಿ ಮಾ.19ರಂದು ಸಂಜೆ ವೇಳೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story