ಸೂರಿಕುಮೇರು | ವಾಹನ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ, ಮಾ.21: ದ್ವಿಚಕ್ರ ವಾಹನವೊಂದು ಪಾದಾಚಾರಿಯೋರ್ವರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಹಾಗೂ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಘಟನೆಯಿಂದ ಪಾದಾಚಾರಿ ಸ್ಥಳೀಯ ನಿವಾಸಿ ಅಬ್ದುಲ್ ಮಜೀದ್ ಹಾಗೂ ವಾಹನ ಚಾಲಕ ವಿರಾಜಪೇಟೆ ನಿವಾಸಿ ಸೋಮಣ್ಣ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮಣ್ಣ ಮಂಗಳೂರಿನ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಅವರು ವಿರಾಜಪೇಟೆಯಿಂದ ಮಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
Next Story