ಮಾ.23ರಂದು ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ
ಉಡುಪಿ: ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡದ (ಮಿನಿ ವಿಧಾನಸೌಧ) ಉದ್ಘಾಟನಾ ಸಮಾರಂಭ ಮಾ.23ರ ಗುರುವಾರ ಅಪರಾಹ್ನ 2:30ಕ್ಕೆ ಬ್ರಹ್ಮಾವರದಲ್ಲಿ ನಡೆಯಲಿದೆ.
ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ನೆರವೇರಿಸಲಿದ್ದಾರೆ. ಶಾಸಕ ಕೆ.ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್, ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ವಿ.ಸೋಮಣ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.