ಅಮೆರಿಕದ ಉನ್ನತ ಹುದ್ದೆಗೆ ಭಾರತೀಯ ಮೂಲದ ಮಹಿಳೆ ನಿಷಾ ದೇಸಾಯಿ ನೇಮಕ
ವಾಷಿಂಗ್ಟನ್, ಮಾ.21: ಅಮೆರಿಕದ ಇಂಟರ್ನ್ಯಾಷನಲ್ ಡೆವಲಪ್ಮೆಂಟ್ ಫೈನಾನ್ಸ್ ಕಮಿಷನ್ನ ಉನ್ನತ ಆಡಳಿತ ಹುದ್ದೆಗೆ ಭಾರತೀಯ ಮೂಲದ ನಿಷಾ ದೇಸಾಯಿ ಬಿಸ್ವಾಲ್ರನ್ನು ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನಗೊಳಿಸಿದ್ದಾರೆ ಎಂದು ಶ್ವೇತಭವನ ಸೋಮವಾರ ಹೇಳಿದೆ.
ಒಬಾಮಾ ಆಡಳಿತದ ಅವಧಿಯಲ್ಲಿ ನಿಷಾ ದೇಸಾಯಿ ದಕ್ಷಿಣ ಮತ್ತು ಮಧ್ಯ ಏಶ್ಯಾ ವ್ಯವಹಾರ ವಿಭಾಗದಲ್ಲಿ ಸಹಾಯಕ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದು ಅಮೆರಿಕದ ವಿದೇಶಾಂಗ ಕಾರ್ಯನೀತಿ, ಅಂತರಾಷ್ಟ್ರೀಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಷಯದಲ್ಲಿ 30ಕ್ಕೂ ಹೆಚ್ಚು ವರ್ಷದ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು ಅಮೆರಿಕದ ಚೇಂಬರ್ ಆಫ್ ಕಾಮರ್ಸ್ನ ಅಂತರಾಷ್ಟ್ರೀಯ ಕಾರ್ಯತಂತ್ರ ಮತ್ತು ಜಾಗತಿಕ ಉಪಕ್ರಮ ವಿಭಾಗದಲ್ಲಿ ಹಿರಿಯ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
Next Story