Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋಮವಾರಪೇಟೆ | ಮಗನ ಸಾವಿಗೆ ಕಾರಣವಾದ...

ಸೋಮವಾರಪೇಟೆ | ಮಗನ ಸಾವಿಗೆ ಕಾರಣವಾದ ಅಪಘಾತ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದ ತಂದೆ

21 March 2023 11:51 PM IST
share
ಸೋಮವಾರಪೇಟೆ | ಮಗನ ಸಾವಿಗೆ ಕಾರಣವಾದ ಅಪಘಾತ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದ ತಂದೆ

ಸೋಮವಾರಪೇಟೆ, ಮಾ.21: ನನ್ನ ಮಗನಾದ ಭಾನುಮೂರ್ತಿಯನ್ನು ಕೊಲೆಮಾಡಿ ರಸ್ತೆಯಲ್ಲಿ ಹಾಕಿ ಅಪಘಾತ ಎಂದು ಬಿಂಬಿಸಿ ಪ್ರಕರಣ ದಾಖಲಿಸಲಾಗಿ ದೆ. ಘಟನೆಯ ಬಗ್ಗೆ ಪೊಲೀಸರು ಮರು ತನಿಖೆ ನಡೆಸುವ ಮೂಲಕ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಮೃತರ ತಂದೆ ಕೆ.ಎನ್.ಚಂದ್ರು ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ನನ್ನ ಮಗನಾದ ಭಾನುಮೂರ್ತಿ ಆಟೊರಿಕ್ಷಾ ಓಡಿಸಿಕೊಂಡು ಅದರಲ್ಲಿ ಬರುವ ಬಾಡಿಗೆ ಹಣದಿಂದ ನಮ್ಮ ಕುಟುಂಬವನ್ನು ಸಾಕುತ್ತಿದ್ದ. ಕಳೆದ ಜ.31ರಂದು ಸಂಜೆ 7.30ರ ಸಮಯದಲ್ಲಿ ಬಾಣಾವಾರದಿಂದ ಹೆಬ್ಬಾಲೆಗೆ ಬಾಡಿಗೆ ಹೋಗಿ ಹಿಂತಿರುಗಿ ಬಾಣಾವಾರಕ್ಕೆ ಬರುವಾಗ ಸಿದ್ದಲಿಂಗಪುರ ಮುತ್ತಪ್ಪನವರ ಮನೆಯ ಎದುರು ಅಪಘಾತವಾದ ರೀತಿಯಲ್ಲಿ ಆಟೊ ಮತ್ತು ಸ್ಕೂಟಿ ಕಂಡು ಬಂದಿದ್ದು, ಆಟೊದಲ್ಲಿದ್ದ ನನ್ನ ಮಗ ಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಆದರೆ ಸ್ಕೂಟಿಯಲ್ಲಿದ್ದವರಿಗೆ ಏನೂ ಆಗಿಲ್ಲ ಎಂದು ಹೇಳಿದರು. ಅಪಘಾತವಾಗುವುದಕ್ಕಿಂತ ಮುನ್ನ ಸಿದ್ದಲಿಂಗಪುರದ ಬಾರ್‌ನಲ್ಲಿ ಗಲಾಟೆ ನಡೆದಿದ್ದು ಮಗನಿಗೆ ಹಲ್ಲೆ ನಡೆಸಿ, ನಂತರ ಹಿಂಬಾಲಿಸಿ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಅಪಘಾತವೆಂದು ಕಟ್ಟುಕತೆ ಕಟ್ಟಿದ್ದಾರೆ' ಎಂದು ಆರೋಪಿಸಿದರು.

'ಈ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗಿದೆ. ಅಲ್ಲಿ ಹಲ್ಲೆ ಮಾಡಿದವರ ಹೆಸರುಗಳನ್ನು ಕೊಟ್ಟಿದ್ದೇವೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕುಶಾಲನಗರ ಇನ್ ಸ್ಪೆಕ್ಟರ್ ಅವರಿಗೆ ದೂರು ನೀಡಲಾಗಿದ್ದು ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಪರಿಶಿಷ್ಟ ಜಾತಿಯ ಬಡವರು ಎಂಬ ಕಾರಣಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ' ಎಂದು ದೂರಿದರು.

ಸೂಕ್ತ ತನಿಖೆಗೆ ಆಗ್ರಹಿಸಿ ಈಗಾಗಲೇ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ. ನಿಷ್ಪಕ್ಷ ತನಿಖೆ ಮಾಡಿ, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಸೂಕ್ತ ನ್ಯಾಯ ಸಿಗದಿದ್ದರೆ ಸ್ತ್ರೀಶಕ್ತಿ ಸಂಘಗಳು ಹಾಗೂ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೃತನ ತಾಯಿ ಶಿವಮ್ಮ, ತಂಗಿ ಭವಾನಿ, ಮಾವ ಕುಳ್ಳಯ್ಯ ಇದ್ದರು.

share
Next Story
X