ಅನಧಿಕೃತ ಇ ಸಿಗರೇಟ್ ಮಾರಾಟ: ಅಂಗಡಿಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರು, ಮಾ.22: ಬೆಂಗಳೂರಿನಲ್ಲಿ ಅನಧಿಕೃತವಾಗಿ ಇ ಸಿಗರೇಟ್ ಹಾಗೂ ವಿದೇಶಿ ಸಿಗರೇಟ್ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಕಾರ್ಯಾಚರಣೆಗೆ ಇಳಿದ ಸಿಸಿಬಿ ಪೊಲೀಸರು ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.
ಕೋರಮಂಗಲ, ಮೈಕೋಲೇಔಟ್, ಕಬ್ಬನ್ ಪಾರ್ಕ್, ಕೆ ಎಸ್ ಲೇಔಟ್, ಪುಲಿಕೇಶಿ ನಗರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹಲವು ಅಂಗಡಿಗಳ ಮೇಲೆ ಏಕಕಾಲದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ 8.9 ಲಕ್ಷ ಮೌಲ್ಯದ 681 ಇ ಸಿಗರೇಟ್ ಹಾಗೂ 805 ಫಾರಿನ್ ಸಿಗರೇಟ್ ವಶಕ್ಕೆ ಪಡೆಯಲಾಗಿದ್ದು, ಅಂಗಡಿ ಮಾಲೀಕರ ವಿರುದ್ಧ ದಿ ಪ್ರೊಹಿಬಿಷನ್ ಆಫ್ ಎಲೆಕ್ಟ್ರಾನಿಕ್ ಸಿಗರೇಟ್ ಆಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.
Next Story