Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಟ ಚೇತನ್ ಗೆ ಜಾಮೀನು

ನಟ ಚೇತನ್ ಗೆ ಜಾಮೀನು

23 March 2023 5:23 PM IST
share
ನಟ ಚೇತನ್ ಗೆ ಜಾಮೀನು

ಬೆಂಗಳೂರು, ಮಾ.23: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅವರಿಗೆ ನಗರದ 32ನೆ ಎಸಿಎಂಎಂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನಟ ಚೇತನ್ ಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶೆ ಜೆ.ಲತಾ ಅವರಿದ್ದ ನ್ಯಾಯಪೀಠ, ಜಾಮೀನು ಭದ್ರತೆಯಾಗಿ 25 ಸಾವಿರ ರೂ.ವೈಯಕ್ತಿಕ ಬಾಂಡ್ ಅಥವಾ ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ನೀಡಲು ಆದೇಶಿಸಿತು. ಅಲ್ಲದೇ, ತನಿಖೆಗೆ ಸಹಕರಿಸುವಂತೆ ನಿರ್ದೇಶಿಸಿದೆ.

ಅರ್ಜಿದಾರರ ಪರ ವಾದಿಸಿದ ವಕೀಲರು, ಉರಿಗೌಡ ಮತ್ತು ನಂಜೇಗೌಡ ಎಂಬವವರು ಟಿಪ್ಪುವನ್ನು ಕೊಂದರು ಎಂಬುದನ್ನು ಬಿಜೆಪಿ ಮತ್ತು ಸಂಘ ಪರಿಹಾರ ಸೃಷ್ಟಿಸಿದ್ದು, ಚೇತನ್ ಅವರು ಇದು ಒಂದು ಸುಳ್ಳು ಎಂದು ಹೇಳಿದ್ದಾರೆ. ಇದಕ್ಕೆ ಇತಿಹಾಸದಲ್ಲಿ ಯಾವುದೇ ದಾಖಲೆ ಇಲ್ಲ ಎಂದು ಒಕ್ಕಲಿಗ ಸಮುದಾಯ ಸ್ವಾಮೀಜಿ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂಥ ಸುಳ್ಳುಗಳನ್ನು ಪ್ರಶ್ನೆ ಮಾಡಬೇಕು. ಚೇತನ್ ಅವರು ಅದನ್ನು ಮಾಡಿದ್ದಾರೆ. ಒಕ್ಕಲಿಗರು ಮತ್ತು ಮುಸ್ಲಿಮ್ ಸಮುದಾಯದ ವಿರುದ್ಧ ವೈಷಮ್ಯ ಉಂಟು ಮಾಡುವ ಕೃತ್ಯವನ್ನು ಮಾಡಬಾರದು ಎಂದು ಚೇತನ್ ಹೇಳಿದ್ದಾರೆ. ಹೀಗಾಗಿ, ಐಪಿಸಿ ಸೆಕ್ಷನ್ 295 ಇಲ್ಲಿ ಅನ್ವಯಿಸುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು. 

1927ರಲ್ಲಿ ಮಾ.20ರಂದು ಅಂಬೇಡ್ಕರ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಅಸ್ಪøಶ್ಯತೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಈ ಮೂಲಕ ದುರ್ಬಲ ವರ್ಗದವರ ಪರವಾಗಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿ ಯಾರ ಬಗ್ಗೆಯೂ ಅವರು ಕೆಟ್ಟ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲ. ಪ್ರಜಾಪ್ರಭುತ್ವದ ಚೌಕಟ್ಟಿನಲ್ಲಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಯಾವುದೇ ಕೃತ್ಯವನ್ನೂ ಚೇತನ್ ಅವರು ಎಸಗಿಲ್ಲ ಎಂದು ಪೀಠಕ್ಕೆ ತಿಳಿಸಿದರು. 

ಸರಕಾರಿ ಪರ ವಕೀಲರು ವಾದಿಸಿ, ಚೇತನ್ ಅವರು ಹಲವು ಬಾರಿ ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ವಿಭಿನ್ನ ಕೋಮುಗಳ ನಡುವೆ ದ್ವೇಷ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಮನವಿ ಮಾಡಿದರು. ಬೆಂಗಳೂರಿನ ಶಿವಕುಮಾರ್ ಎಂಬವರು ನೀಡಿದ್ದ ದೂರಿನ ಮೇಲೆ ಶೇಷಾದ್ರಿಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295ಎ ಮತ್ತು 505ಬಿ ಅಡಿ ಎಫ್‍ಐಆರ್ ದಾಖಲಿಸಿ, ಮಂಗಳವಾರ ಚೇತನ್ ಅವರನ್ನು ಬಂಧಿಸಲಾಗಿತ್ತು.

share
Next Story
X