ಬ್ಯಾನರ್, ಕಟೌಟ್‌ಗಳ ತೆರವಿಗೆ ಮಾ.24 ಕೊನೆ ದಿನ: ಉಡುಪಿ ನಗರಸಭೆ
ಉಡುಪಿ, ಮಾ.23: ರಾಜ್ಯ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023ರ ಪ್ರಯುಕ್ತ ಉಡುಪಿ ನಗರಸಭೆ ಯಿಂದ ಅನುಮತಿ ನೀಡಿ ಅವಧಿ ಮುಗಿದಿರುವ ಹಾಗೂ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಬಂಟಿಂಗ್ಸ್ ಹಾಗೂ ಕಟೌಟ್‌ಗಳನ್ನು ಮಾ.24ರೊಳಗೆ ತೆರವು ಗೊಳಿಸುವಂತೆ ನಗರಸಭೆಯ ಪೌರಾಯುಕ್ತ ಕಚೇರಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮ ನಡೆಸಲು ಹಾಗೂ ಬ್ಯಾನರ್ ಮತ್ತು ಕಟೌಟ್‌ಗಳನ್ನು ಅಳವಡಿಸಲು ನಗರಸಭೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ಸದರಿ ಬ್ಯಾನರ್, ಬಂಟಿಂಗ್ಸ್ ಹಾಗೂ ಹೋರ್ಡಿಂಗ್ಸ್ ಗಳನ್ನು ಅನಧಿಕೃತವೆಂದು ಪರಿಗಣಿಸಿ, ನಗರಸಭೆಯಿಂದ ತೆರವು ಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Next Story