ಬಿಎಸ್ ವೈ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬೆಂಗಳೂರು, ಮಾ.24: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಸೇವಿಸಿದರು.
ನಗರದ ಕುಮಾರಕೃಪಾ ರಸ್ತೆಯಲ್ಲಿರುವ ತನ್ನ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರನ್ನು ಬಿ.ಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ವಿಜಯೇಂದ್ರ ಹೂ ಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಉಪಸ್ಥಿತರಿದ್ದರು.




Next Story