ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೈಕಮಾಂಡ್ ಗೆ ಹೇಳಿದ್ದೇನೆ: ಸಿದ್ದರಾಮಯ್ಯ
ಚಿತ್ರದುರ್ಗ: 'ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೈಕಮಾಂಡ್‌ಗೆ ಹೇಳಿದ್ದೇನೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ನಮ್ಮ ಮನೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ. ಹಾಗಾಗಿ ವರುಣಾ ಕ್ಷೇತ್ರದ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಕೇಳಿದ್ದೇನೆ'' ಎಂದು ಸ್ಪಷ್ಟಪಡಿಸಿದರು.
'ವರುಣಾ ಜೊತೆಗೆ ಇನ್ನೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಮನೆಯಲ್ಲಿ ಹೇಳುತ್ತಿದ್ದಾರೆ. ಈ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ಚುನಾವಣೆಗೆ ಸ್ಪರ್ಧಿಸುವಂತೆ ರಾಜ್ಯದ 25 ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಆ ಎಲ್ಲ ಕಡೆಯೂ ಸ್ಪರ್ಧಿಸಲು ಸಾಧ್ಯವಿಲ್ಲ' ಎಂದು ತಿಳಿಸಿದರು.
Next Story