ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ: ರಾಹುಲ್ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ
ಬೆಂಗಳೂರು: 'ರಾಹುಲ್ ಗಾಂಧಿ ಅವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರಸ್, 'ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ' ಎಂದು ಎಚ್ಚರಿಕೆ ನೀಡಿದ್ದಾರೆ.
'ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ, ನರೇಂದ್ರ ಮೋದಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ' ಎಂದು ಆರೋಪಿಸಿದ್ದಾರೆ.
'ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿ ಅವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಬೇಧ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ' ಎಂದು ಕರೆ ನೀಡಿದ್ದಾರೆ.
''ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ'' ಎಂದು ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ನಮ್ಮ ನಾಯಕರಾದ @RahulGandhi ಅವರು ಹೇಳುವ ಸತ್ಯವನ್ನು ಎದುರಿಸಲಾಗದ @narendramodi ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ.
— Siddaramaiah (@siddaramaiah) March 24, 2023
ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. 1/5#IndiaWithRG pic.twitter.com/8S90exNH8g
ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. @narendramodi, @BJP4India ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ @RahulGandhi ಅವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. 3/5#IndiaWithRG
— Siddaramaiah (@siddaramaiah) March 24, 2023
ನಮ್ಮ ನಾಯಕರಾದ @RahulGandhi ಅವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ.
— Siddaramaiah (@siddaramaiah) March 24, 2023
ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ. 5/5#IndiaWithRG