ಟಿಪ್ಪರ್ ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು
ಕುಂದಾಪುರ, ಮಾ.24: ಮಿನಿ ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.24ರಂದು ಬೆಳಗ್ಗೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಎಂಬವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಕುಮಾರ್ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story