Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ಆಹಾರ ಪಥ ಉತ್ಸವಕ್ಕೆ ಚಾಲನೆ

ಮಂಗಳೂರು : ಆಹಾರ ಪಥ ಉತ್ಸವಕ್ಕೆ ಚಾಲನೆ

24 March 2023 8:50 PM IST
share
ಮಂಗಳೂರು : ಆಹಾರ ಪಥ ಉತ್ಸವಕ್ಕೆ ಚಾಲನೆ

ಮಂಗಳೂರು, ಮಾ.24: ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್‌ರ ಮಾರ್ಗದರ್ಶನ ದಲ್ಲಿ ನಗರದ ಪ್ರಥಮ ಹಾಗೂ ಅತೀ ದೊಡ್ಡ ಆಹಾರ ಪಥ ಉತ್ಸವಕ್ಕೆ ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಗುರುವಾರ ರಾತ್ರಿ ಅದ್ದೂರಿಯ ಚಾಲನೆ ನೀಡಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ತುಳುನಾಡಿನ ವಿಶೇಷ ಖಾದ್ಯಗಳು ಮತ್ತು ಅಂತರಾಜ್ಯದ ತಿಂಡಿ ತಿನಿಸುಗಳು, ರಂಗುರಂಗಿನ ಸಾಂಸ್ಕೃತಿಕ ಸಂಭ್ರಮದ ಸ್ಪರ್ಶದೊಂದಿಗೆ ವಿಶಿಷ್ಟ ಅನುಭವ ಹಾಗೂ ಅನುಭೂತಿಯನ್ನು ಈ ಫೆಸ್ಟಿವಲ್ ನಾಗರಿಕರಿಗೆ 5 ದಿನಗಳ ಕಾಲ ಉಣಬಡಿಸಲಿದೆ ಎಂದರು.

ಮಂಗಳೂರು ಆಹಾರ ಪಥ ಉತ್ಸವ ಮಾ.26ರವರೆಗೆ ಸಂಜೆ 5ರಿಂದ ರಾತ್ರಿ 11ರವರೆಗೆ ನಡೆಯಲಿದೆ. ತುಳುನಾಡಿನ ಆಹಾರ ಸಮೃದ್ಧತೆಯನ್ನು ಹೊಸ ತಲೆಮಾರಿಗೆ ಪರಿಚಯಿಸುವ ಮತ್ತು ಸ್ವಉದ್ಯೋಗಕ್ಕೆ ವೇದಿಕೆ ಒದಗಿಸಿ ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಈ ಉತ್ಸವವನ್ನು ಆಯೋಜಿಸಲಾಗಿದೆ ಎಂದರು.

ಸ್ವಉದ್ಯೋಗ, ವಿವಿಧ ವ್ಯವಹಾರ ಕ್ಷೇತ್ರಗಳಾದ ಆತಿಥ್ಯ, ಐಸ್ ಕ್ರೀಂ, ಗೃಹ ಉತ್ಪನ್ನಗಳು, ಕ್ಯಾಟರಿಂಗ್ ಉದ್ಯಮ ದವರಿಗೆ ವೇದಿಕೆ ಕಲ್ಪಿಸುವ ಸದುದ್ದೇಶ ಇದೆ. ವಿಭಿನ್ನ ಸಾಂಸ್ಕೃತಿಕ, ಕರಾವಳಿಯ ಮನೋರಂಜನಾ ಕಾರ್ಯಕ್ರಮ ಗಳು ಉತ್ಸವದ ಮೆರಗು ಹೆಚ್ಚಿಸುತ್ತಿವೆ ಎಂದು ವೇದವ್ಯಾಸ ಕಾಮತ್ ಹೇಳಿದರು.

ಕರಾವಳಿ ಉತ್ಸವ ಮೈದಾನದ ಮುಂಭಾಗದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖಾಂತರ ಮಣ್ಣಗುಡ್ಡೆ ಜಂಕ್ಷನ್ ತನಕ 200ಕ್ಕೂ ಅಧಿಕ ಸ್ಟಾಲ್, ಸಾಂಸ್ಕೃತಿಕ ವೇದಿಕೆಗಳು, ರಸ್ತೆಗಳ ಉದ್ದಕ್ಕೂ ದೀಪಾಲಂಕಾರ, ಮಕ್ಕಳಿಗೆ ಆಡಲು ಪ್ರತ್ಯೇಕ ಕಿಡ್ಸ್ ರೆನ್ ವಿಶೇಷ ಆಕರ್ಷಣೆಯಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ ಪಾಂಡೇಶ್ವರ, ಪ್ರಮುಖರಾದ ರೂಪಾ ಡಿ. ಬಂಗೇರ, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಳ್ಳಾಲ್‌ಭಾಗ್, ಜಗದೀಶ್ ಕದ್ರಿ, ಲಲಿತ್‌ರಾಜ್  ಮೆಂಡನ್, ಅಶ್ವಿತ್ ಕೊಟ್ಟಾರಿ ಉಪಸ್ಥಿತರಿದ್ದರು.

share
Next Story
X