Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಶ್ವಕರ್ಮ ಸಮುದಾಯ ರಾಜಕೀಯವಾಗಿ ಉನ್ನತ...

ವಿಶ್ವಕರ್ಮ ಸಮುದಾಯ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಲಿ: ಡಾ. ಚಂದ್ರಶೇಖರ್ ಕಂಬಾರ

24 March 2023 9:49 PM IST
share
ವಿಶ್ವಕರ್ಮ ಸಮುದಾಯ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಲಿ: ಡಾ. ಚಂದ್ರಶೇಖರ್ ಕಂಬಾರ

ಬೆಂಗಳೂರು, ಮಾ, 24; ವಿಶ್ವ ಕರ್ಮ ಜನಾಂಗ ದೇಶ, ವಿದೇಶಗಳಲ್ಲಿ ಮಹೋನ್ನತ ಕೆಲಸ ಮಾಡುತ್ತಿದ್ದು, ಇಂತಹ ಸಮುದಾಯ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಲು ಇದು ಸೂಕ್ತ ಕಾಲ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ಹೇಳಿದ್ದಾರೆ.

ನಾಯಂಡಹಳ್ಳಿ ಬಳಿ ವಿಶ್ವಕರ್ಮ ಸೇವಾಪ್ರತಿಷ್ಠಾನ ಉಪಾಧ್ಯಕ್ಷ ಹಾಗೂ ಜೆಡಿಎಸ್ ಉಪಾಧ್ಯಕ್ಷ ಡಾ. ಬಿಎಂ ಉಮೇಶ್ ಕುಮಾರ್ ನೇತೃತ್ವದಲ್ಲಿ ಹಾಗೂ ವಿಶ್ವಕರ್ಮ ಜಗದ್ಗುರು ಪೀಠ ಶಿವಸುಜ್ಞಾನತೀರ್ಥ ಸ್ವಾಮೀಜಿ ಸಾನಿಧ್ಯದಲ್ಲಿ, ಆಯೋಜಿಸಿದ್ದ ರಾಜ್ಯಮಟ್ಟದ ವಿಶ್ವಕರ್ಮ ಸಮಾಜದ ಬೃಹತ್ ಜನ ಜಾಗೃತಿ ಸಮಾವೇಶ ಉದ್ಘಾಟಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅನುಪಸ್ಥಿತಿಯಲ್ಲಿ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ವಿಶ್ವಕರ್ಮ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಡಾ. ಚಂದ್ರಶೇಖರ್ ಕಂಬಾರ, ವಿಶ್ವಕರ್ಮ ಜನಾಂಗ ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಬೇಕು ಎಂದರು.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸಂಘಟನೆಯಾಗಿ ಕಾರ್ಯಕ್ರಮ ಆಯೋಜಿಸಿರುವುದು ಸಂತಸ ತಂದಿದೆ. ಜನಾಂಗದವರು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಸೇರಿರುವುದು ಉತ್ತಮ ಬೆಳವಣಿಗೆ. ಈ ವೈಭವವನ್ನು ನೋಡಲು ಎರಡು ಕಣ್ಣು ಸಾಲದು. ದೇಶ ವಿದೇಶಗಳಲ್ಲಿ ಸಾಕಷ್ಟು ಕಡೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಪ್ರಪಂಚದ ಯಾವುದೇ ಭಾಗಕ್ಕೆ ಹೋದರೂ ನಮ್ಮ‌ಜನಾಂಗ ಕೆತ್ತಿರುವ ಶಿಲೆಗಳು ಹಾಗೂ ಆಭರಣಗಳು ಕಂಡು ಬರುತ್ತವೆ. ಭಾರತೀಯ ಆಭರಣ ಗುಣ ಎಲ್ಲಾ ದೇಶದ ಆಭರಣಗಳನ್ನು ಮೀರಿಸುತ್ತದೆ. ಆಭರಣ ಗುಣವನ್ನು ಮೀರಿ ರಾಜಕೀಯವಾಗಿ ಮೇಲುಗೈ ಸಾಧಿಸಬೇಕು. ಒಟ್ಟಾರೆ ವಿಶ್ವ ಕರ್ಮ ಜನಾಂಗದ ಕೊಡುಗೆ ಅಪಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ನ ಹಿರಿಯ ಮುಖಂಡ ಡಾ. ಟಿ.ಎ. ಶರವಣ ಮಾತನಾಡಿ, ವಿಶ್ವಕರ್ಮ ಜನಾಂಗ ರಾಜಕೀಯವಾಗಿ ಹಿಂದುಳಿದಿದ್ದು, ಸೂಕ್ತ ಪ್ರಾತಿನಿಧ್ಯೆ ದೊರೆಯುತ್ತಿಲ್ಲ. ಆದರೆ ಜೆಡಿಎಸ್ ಸಮುದಾಯಕ್ಕೆ ಸೂಕ್ತ ಅವಕಾಶಗಳನ್ನು ಕಲ್ಪಿಸಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರ ಸ್ವಾಮಿ ಮೂರನೇ ಬಾರಿ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಆಗ ಸಮಾಜದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಶ್ರಮಿಸುತ್ತೇನೆ. ಡಾ. ಉಮೇಶ್ ಕುಮಾರ್ ಅವರಿಗೆ ವೀರಶೈವ ಅಭಿವೃದ್ಧಿ ನಿಗಮದ ಸಾರಥ್ಯ ವಹಿಸುತ್ತೇವೆ ಎಂದರು.

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ರಾಜಕೀಯ ರಂಗ ರಚನೆಯಾಗುತ್ತಿದ್ದು, 18 ಪಕ್ಷಗಳ ಮುಖಂಡರು ಒಂದೆಡೆ ಸೇರಿ ರಾಷ್ಟ್ರ ರಾಜಕಾರಣದ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ಸಭೆಗೆ ತಪ್ಪದೇ ಭಾಗವಹಿಸುವಂತೆ ಒತ್ತಡ ಹಾಕಿದ ಪರಿಣಾಮ ಕುಮಾರಸ್ವಾಮಿ ಅನಿವಾರ್ಯವಾಗಿ ಸಭೆಯಿಂದ ದೂರ ಉಳಿದಿದ್ದಾರೆ. ಆದರೆ ಜೆಡಿಎಸ್ ಪಕ್ಷ ಸಣ್ಣ ಸಮುದಾಯಗಳ ಹಿತ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದು, ಜೆಡಿಎಸ್ ನಿಂದ ಮಾತ್ರ ವಿಶ್ವಕರ್ಮ ಸಮುದಾಯದ ಶ್ರೇಯೋಭಿವೃದ್ಧಿ ಸಾಧ್ಯ ಎಂದು ಡಾ.ಟಿ.ಎ. ಶರವಣ ಪ್ರತಿಪಾದಿಸಿದರು.

share
Next Story
X