ಪಡುಬಿದ್ರೆ: ಮನೆಗೆ ನುಗ್ಗಿ ನಗ-ನಗದು ಕಳವು

ಪಡುಬಿದ್ರೆ: ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಮನೆ ಬಾಗಿಲು ಮುರಿದು ಹಾಡುಹಗಲೇ ಕಳ್ಳತನಗೈದ ಘಟನೆ ಎರ್ಮಾಳಿನಲ್ಲಿ ನಡೆದಿದೆ.
ಕೂಲಿ ಕೆಲಸ ಮಾಡಿಕೊಂಡಿರುವ ಬಾಗಲಕೋಟೆಯ ಹುನಗುಂದ ತಾಲ್ಲೂಕಿನ ಬಿಸನಾಳ ಕೊಪ್ಪ ನಿವಾಸಿ ನಿಂಗವ್ವ ತನ್ನ ಪತಿ ಶರಣಪ್ಪ ಮತ್ತು ಮಕ್ಕಳೊಂದಿಗೆ ತೆಂಕ ಎರ್ಮಾಳು ಗ್ರಾಮದ ಬೀಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಅವರ ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಒಡೆದು ಒಳನುಗ್ಗಿ ಕಪಾಟಿನಲ್ಲಿಟ್ಟಿದ್ದ 1,10,000 ರೂ. ನಗದು, ಸುಮಾರು 28 ಸಾವಿರ ರೂ. ಮೌಲ್ಯದ ಚಿನ್ನದ ಆಭರಣ, ಎರಡು ಸಾವಿರ ರೂ. ಮೌಲ್ಯದ ಬೆಳ್ಳಿಯ ದೀಪ ಕಳವು ಮಾಡಿಕೊಂಡು ಹೋಗಿದ್ದು, ಕಳವುಗೈದ ಒಟ್ಟು ಮೌಲ್ಯದ 1.40 ಲಕ್ಷ ರೂ, ಆಗಿದೆ ಎಂದು ದೂರು ನೀಡಲಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story