ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 177 ವಿದ್ಯಾರ್ಥಿಗಳು ಗೈರು

ಮಂಗಳೂರು, ಮಾ.25: ದ.ಕ.ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 177 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ರಾಜ್ಯಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 4,690 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 4,555 ವಿದ್ಯಾರ್ಥಿಗಳು ಹಾಜರಾಗಿದ್ದರೆ, 135 ಮಂದಿ ಗೈರಾಗಿದ್ದಾರೆ. ಇದೇ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 67 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 55 ಮಂದಿ ಹಾಜರಾಗಿದ್ದರೆ, 12 ಮಂದಿ ಗೈರಾಗಿದ್ದಾರೆ.
ಸಂಖ್ಯಾಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 5,139 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 5,118 ವಿದ್ಯಾರ್ಥಿಗಳು ಹಾಜರಾಗಿದ್ದರೆ, 21 ಮಂದಿ ಗೈರಾಗಿದ್ದಾರೆ. ಇದೇ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 41 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 32 ಮಂದಿ ಹಾಜರಾಗಿದ್ದರೆ, 9 ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟನೆ ತಿಳಿಸಿದೆ.
Next Story