ಕುಡುಂಬೂರು: ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಮಂಗಳೂರು, ಮಾ.25: ನಗರದ ಬೈಕಂಪಾಡಿ ಗ್ರಾಮದ ಕುಡುಂಬೂರು ಎಂಬಲ್ಲಿನ ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇದಾವತಿ ಎಂಬವರು ತನ್ನ ಗಂಡ ಮತ್ತು ಮಗಳೊಂದಿಗೆ ವಾಸವಾಗಿದ್ದು, ಮಾ.24ರಂದು ಬೆಳಗ್ಗೆ 9ಕ್ಕೆ ಸಮೀಪದ ದೇವಸ್ಥಾನಕ್ಕೆ ಹೋಗಿದ್ದು, ಮರಳಿ 10:15ಕ್ಕೆ ಬಂದಾಗ ಮನೆಯ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಹಾಲ್‌ನಲ್ಲಿದ್ದ ಕಬ್ಬಿಣದ ಕಪಾಟು ಒಡೆದು 192 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ. ಸುಮಾರು 6,24,000 ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
Next Story