ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 86 ವಿದ್ಯಾರ್ಥಿಗಳು ಗೈರು
ಉಡುಪಿ, ಮಾ.25: ಉಡುಪಿ ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ನಡೆದ ದ್ವಿತೀಯ ಪಿಯುಸಿಯ ಎರಡು ಪರೀಕ್ಷೆಗಳಿಗೆ ಒಟ್ಟು 86 ಮಂದಿ ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ರಾಜ್ಯಶಾಸ್ತ್ರ ಪರೀಕ್ಷೆಗೆ 61 ಹಾಗೂ ಸಂಖ್ಯಾಶಾಸ್ತ್ರ ಪರೀಕ್ಷೆಗೆ 25 ಮಂದಿ ಗೈರುಹಾಜರಾಗಿದ್ದಾರೆ ಎಂದು ಡಿಡಿಪಿಯು ಪ್ರಕಟಣೆ ತಿಳಿಸಿದೆ.
ರಾಜ್ಯಶಾಸ್ತ್ರ ಪರೀಕ್ಷೆಗೆ ಒಟ್ಟು 1681ವಿದ್ಯಾರ್ಥಿಗಳು ಹೆಸರು ನೊಂದಾಯಿಸಿ ಕೊಂಡಿದ್ದು, ಇವರಲ್ಲಿ 1620 ಮಂದಿ ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ ಸಂಖ್ಯಾಶಾಸ್ತ್ರ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡ 2907 ಮಂದಿಯಲ್ಲಿ 288 2ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story