ಉಡುಪಿ: ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹ ವಿರೋಧಿಸಿ ಪ್ರತಿಭಟನೆ
ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನರ್ಹ ಗೊಳಿಸಿದ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಶನಿವಾರ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ರಾಹುಲ್ ಗಾಂಧಿ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಯವರು ಭಯಭೀತ ರಾಗಿದ್ದಾರೆ. ಇದೇ ಕಾರಣಕ್ಕಾಗಿ ರಾಹುಲ್ ಗಾಂಧಿಯ ಮಾತು ಅಡಗಿಸಲು ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸುವ ಕುತಂತ್ರ ಬುದ್ದಿಯನ್ನು ಬಿಜೆಪಿ ಮಾಡಿದೆ. ಇದರ ವಿರುದ್ಧ ಕಾಂಗ್ರೆಸ್ ಇನ್ನಷ್ಟು ಉಗ್ರವಾಗಿ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್ ಮಾತನಾಡಿ, ರಾಹುಲ್ ಗಾಂಧಿ ಅನ್ಯಾಯ ಮಾಡಿದ ಬಿಜೆಪಿಯ ವರಿಗೆ ಚರಿತ್ರೆ ಇಂದಲ್ಲ ನಾಳೆ ಮರುಕ ಳಿಸುತ್ತದೆ ಎಂಬ ಅರಿವು ಇರಲಿ. ಇಂದು ಜನ ಜಾಗೃತರಾಗಿದ್ದು, ಬಿಜೆಪಿಯ ಈ ಕೆಟ್ಟ ತೀರ್ಮಾನಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ಕೊಡಲಿದ್ದಾರೆ ಎಂದರು.
ಪ್ರತಿಭಟನೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ಅಮೃತ್ ಶೆಣೈ, ವರೋನಿಕಾ ಕರ್ನೆಲಿಯೋ, ಮುರಳಿ ಶೆಟ್ಟಿ, ಭುಜಂಗ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು,. ಕುಶಾಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಸಾಯಿರಾಜ್, ನಾಗೇಶ್ ಕುಮಾರ್ ಉದ್ಯಾವರ, ಇಸ್ಮಾಯಿಲ್ ಆತ್ರಾಡಿ, ಯತೀಶ್ ಕರ್ಕೇರ, ಪ್ರಸಾದ್‌ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ಸೌರಬ್ ಬಲ್ಲಾಳ್, ಕೀರ್ತಿ ಶೆಟ್ಟಿ, ಶಶಿಧರ ಶೆಟ್ಟಿ ಎಲ್ಲೂರು, ಹಬೀಬ್ ಅಲಿ, ಮಹಾಬಲ ಕುಂದರ್, ಗಣೇಶ್ ನೆರ್ಗಿ ಮೊದಲಾದವರು ಉಪಸ್ಥಿತರಿದ್ದರು.