ಮುಸ್ಲಿಮರ ಮೀಸಲಾತಿ ರದ್ದು ಸಂವಿಧಾನ ವಿರೋಧಿ: ವೆಲ್ಫೇರ್ ಪಾರ್ಟಿ
ಉಡುಪಿ: ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದು ಮಾಡಿದ ನಿರ್ಣಯ ವನ್ನು ರಾಜ್ಯ ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ ಆಗ್ರಹಿಸಿದ್ದಾರೆ.
ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ.೪ ಮೀಸಲಾತಿಯನ್ನು ಕಿತ್ತು ಇನ್ನೊಂದು ಸಮುದಾಯಕ್ಕೆ ಹಂಚುವ ಮೂಲಕ ಸಮುದಾಯಗಳ ನಡುವೆ ದ್ವೇಷದ ಬೀಜ ಬಿತ್ತಿ ಮತಗಳಿಸುವ ಹುನ್ನಾರಕ್ಕೆ ಕೈಹಾಕಿದೆ. ಸರಕಾರದ ಈ ನಿರ್ಣಯ ಅಸಂವಿಧಾನಿಕವಾಗಿದೆ ಮತ್ತು ಸದರಿ ಸರಕಾರ ನಡೆಸುತ್ತಿರುವ ಇನ್ನೊಂದು ಮುಸ್ಲಿಮ್ ವಿರೋಧಿ ಧೋರಣೆ ಇದಾಗಿದೆ ಎಂದು ಅವರು ಹೇಳಿಕೆಯಲ್ಲಿ ಟೀಕಿಸಿದ್ದಾರೆ.
Next Story