Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ...

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ರೋಜಿ ಎಂ ಜಾನ್

ಕರಾವಳಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ

25 March 2023 9:56 PM IST
share
ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ರೋಜಿ ಎಂ ಜಾನ್
ಕರಾವಳಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ

ಬಂಟ್ವಾಳ : ಆಡಳಿತಾರೂಢ ಬಿಜೆಪಿ ಸರಕಾರ ಶೇಕಡಾ 40 ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಈ ಸರಕಾರವನ್ನು ಕಿತ್ತೊಗೆಯಲು ಕರ್ನಾಟಕದ ಜನ ನಿರ್ಧರಿಸಿ ಆಗಿದೆ. ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ ಎಂದು ಎಐಸಿಸಿ ಕಾರ್ಯದರ್ಶಿ ರೋಜಿ ಎಂ ಜಾನ್ ಹೇಳಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಗ್ಗ - ಕಾರಿಂಜ ಕ್ರಾಸ್ ಬಳಿ ನಡೆದ ಕರಾವಳಿ ಪ್ರಜಾಧ್ವನಿ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರಕಾರದ  ಎರಡನೇ ಅವಧಿ ಕೂಡಾ ಮುಗಿಯುತ್ತಾ ಬಂದಿದ್ದು, ಮೋದಿ ಹೇಳಿದ ಅಚ್ಚೇ ದಿನ್ ಇನ್ನೂ ಬಂದಿಲ್ಲ. ಹದಿನೈದು ಲಕ್ಷವೂ ಇಲ್ಲ,  ಕಪ್ಪು ಹಣವೂ ಇಲ್ಲ, ಪೆಟ್ರೋಲ್ ಡೀಸೆಲ್ ನೂರರ ಗಡಿ ದಾಟಿ ಆಗಿದೆ. ಇದೇನಾ ಅಚ್ಚೆ ದಿನ ಎಂದವರು ಪ್ರಶ್ನಿಸಿದರು. 

ರಾಹುಲ್ ಗಾಂಧಿ ವಿಷಯದಲ್ಲಿ ಅನುಸರಿಸಿದ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ.  ಈ ಬಾರಿಯ ಚುನಾವಣಾ ಪ್ರಥಮ ಪಟ್ಟಿಯಲ್ಲೇ ರಮಾನಾಥ ರೈ ಉಮೇದುವಾರಿಕೆ ಘೋಷಣೆಯಾಗಿರುವುದು ಬಂಟ್ವಾಳ ಕ್ಷೇತ್ರದ ಜನರ ಪಾಲಿನ ಮೊದಲ ಮುನ್ನಡೆಯಾಗಿದೆ.  ಕಾಂಗ್ರೆಸ್ ಪಕ್ಷದ ಬದ್ಧತೆ ಅರ್ಥ ಮಾಡಿಕೊಳ್ಳಲು ಗತ ಇತಿಹಾಸ ಅಧ್ಯಯನ ಮಾಡಬೇಕಾಗಿಲ್ಲ. ಕೇವಲ ಸಿದ್ದರಾಮಯ್ಯರ ಯುಗವನ್ನೊಮ್ಮೆ ತಿರುಗಿ ನೋಡಿದರೆ ಸಾಕು ಎಂದು ನೆನಪಿಸಿದರು.

ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಂಟ್ವಾಳ ಕೆಂಪಯ್ಯ ಹರಿಪ್ರಸಾದ್ ಅವರು ಮಾತನಾಡಿ, ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದ ಫಲಿತಾಂಶದಲ್ಲೂ ಹಿಂದೆ ಬಿದ್ದಿದೆ. ಫಲಿತಾಂಶ ಪಟ್ಟಿಯಲ್ಲಿ ಪ್ರಥಮ, ದ್ವಿತೀಯ ಸ್ಥಾನದಲ್ಲಿ  ಬರುತ್ತಿದ್ದ ಅವಳಿ ಜಿಲ್ಲೆಗಳು ಇದೀಗ ಹದಿನೆಂಟನೇ ಸ್ಥಾನಕ್ಕೂ ಕೆಳಗಿಳಿದಿದೆ. ಅಂದರೆ ಶಿಕ್ಷಣ ಕ್ಷೇತ್ರವನ್ನೂ ಬಿಜೆಪಿ ಸರಕಾರ ಬಾಧಿಸಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು ಎಂದರು.

ಆಹಾರ, ವಸತಿ, ಉಡುಗೆ, ಆರೋಗ್ಯ, ಶಿಕ್ಷಣ ಇದನ್ನು ಸಮಾನವಾಗಿ ಕೊಡುವುದು ಚುನಾಯಿತ ಸರಕಾರದ ಆದ್ಯತೆಯಾಗಿದ್ದು, ಬಿಜೆಪಿ ಸರಕಾರದಲ್ಲಿ ಇದು ಮರೀಚಿಕೆ ಯಾಗಿದೆ  ಎಂದ ಬಿ ಕೆ ಹರಿಪ್ರಸಾದ್ ಮೋದಿ ಭರವಸೆ ನೀಡಿದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ ಪಕ್ಷ ಉಳುವವನೇ ಒಡೆಯನಾಗಿ ಮಾಡಿದರೆ, ಬಿಜೆಪಿ ಉಳ್ಳವನೇ ಒಡೆಯ ಎಂದು ಮಾಡ್ತಾ ಇದೆ ಎಂದು ಟೀಕಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ, ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ರಮಾನಾಥ ರೈ, ಒಂಭತ್ತನೇ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡಿದ ಪಕ್ಷಕ್ಕೆ ಚಿರಋಣಿ. ಇದಕ್ಕೆ ಕಾರಣಕರ್ತರಾದ ಪಕ್ಷದ ಕಾರ್ಯಕರ್ತರು, ಮತದಾರರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ವಿಧಾನಪರಿಷತ್ ಸದಸ್ಯ, ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ರಾಜ್ಯಸಭಾ ಮಾಜಿ ಸದಸ್ಯ ಬಿ ಇಬ್ರಾಹಿಂ, ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಪಂಚಾಯತ್ ರಾಜ್ ಒಕ್ಕೂಟದ ದ ಕ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಜೋರಾ, ಇಬ್ರಾಹಿಂ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಹಿರಿಯ ನಾಯಕ ಜಿನರಾಜ ಅರಿಗ, ಕಾವಳ ಮೂಡೂರು ಗ್ರಾ.ಪಂ. ಅಧ್ಯಕ್ಷೆ ರಜನಿ ವೇದಿಕೆಯಲ್ಲಿದ್ದರು.
ಇದೇ ವೇಳೆ ಬಂಟ್ವಾಳ ಬ್ಲಾಕ್ ವ್ಯಾಪ್ತಿಯ ಹಲವು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಲೋಲಾಕ್ಷ ಶೆಟ್ಟಿ, ಬಿ ವಾಸು ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಮುಹಮ್ಮದ್ ನಂದರಬೆಟ್ಟು, ಪ್ರಮುಖರಾದ ಸಂಪತ್ ಕುಮಾರ್ ಶೆಟ್ಟಿ, ಉಮೇಶ್ ಕುಲಾಲ್ ನಾವೂರು, ಸುದರ್ಶನ ಜೈನ್, ರಾಜೇಶ್ ರೋಡ್ರಿಗಸ್, ಪ್ರವೀಣ್ ರೋಡ್ರಿಗಸ್ ವಗ್ಗ, ವೆಂಕಪ್ಪ ಪೂಜಾರಿ, ಬಿ ಮೋಹನ್, ಕೆ ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ರಿಯಾಝ್ ಹುಸೈನ್ ಬಂಟ್ವಾಳ, ಸಂಜೀವ ಪೂಜಾರಿ ಬೊಳ್ಳಾಯಿ, ಅರ್ಶದ್ ಸರವು, ಶಬೀರ್ ಸಿದ್ದಕಟ್ಟೆ, ರಝಾಕ್ ಬಾಂಬಿಲ ಮೊದಲಾದವರು ಭಾಗವಹಿಸಿದ್ದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಪ್ರಸ್ತಾವನೆಗೈದರು. ಚಂದ್ರಶೇಖರ ಕರ್ಣ ವಂದಿಸಿ, ರಾಜೀವ್ ಶೆಟ್ಟಿ ಎಡ್ತೂರು ಹಾಗೂ ಜಗದೀಶ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.

share
Next Story
X