Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್: 1000 ವಸಾಹತು ಮನೆ ನಿರ್ಮಾಣ...

ಇಸ್ರೇಲ್: 1000 ವಸಾಹತು ಮನೆ ನಿರ್ಮಾಣ ಟೆಂಡರ್ ಗೆ ಅನುಮೋದನೆ

25 March 2023 10:43 PM IST
share
ಇಸ್ರೇಲ್: 1000 ವಸಾಹತು ಮನೆ ನಿರ್ಮಾಣ ಟೆಂಡರ್ ಗೆ ಅನುಮೋದನೆ

ರಮಲ್ಲಾ, ಮಾ.25: ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಬಲಪಂಥೀಯ ಸರಕಾರವು ಆಕ್ರಮಿತ ಪಶ್ಚಿಮದಂಡೆ ಮತ್ತು ಪೂರ್ವ ಜೆರುಸಲೇಮ್‍ನಲ್ಲಿರುವ ಯಹೂದಿ ವಸಾಹತುಗಳಲ್ಲಿ 1000ಕ್ಕೂ ಅಧಿಕ ಹೊಸ ಇಸ್ರೇಲಿ ಮನೆಗಳ ನಿರ್ಮಾಣದ ಬಿಡ್‍ಗಳನ್ನು ಅಧಿಕೃತಗೊಳಿಸಿದೆ.

ಪಶ್ಚಿಮ ದಂಡೆಯ ಎಫ್ರಾತ್ ಮತ್ತು ಬೈತರ್ ಇಲಿಟ್ ಪ್ರಾಂತದಲ್ಲಿ 940 ಮನೆಗಳನ್ನು, ಗಿಲೊ ವಸಾಹತು ಪ್ರದೇಶದಲ್ಲಿ 89 ಮನೆಗಳ ನಿರ್ಮಾಣಕ್ಕೆ ಇಸ್ರೇಲ್ ಭೂ ಪ್ರಾಧಿಕಾರ ಈ ವಾರದ ಆರಂಭದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸಿತ್ತು. ಈ ಎರಡೂ ಪ್ರದೇಶಗಳನ್ನು 1967ರ ಯುದ್ಧದಲ್ಲಿ ಇಸ್ರೇಲ್ ವಶಕ್ಕೆ ಪಡೆದಿದೆ.

ಇದೀಗ ಈ ಪ್ರದೇಶಗಳಲ್ಲಿ ಮನೆನಿರ್ಮಾಣ ಬಿಡ್‍ಗಳಿಗೆ ಸರಕಾರದ ಅನುಮೋದನೆಯ ವಿವರವನ್ನು  ವಸಾಹತು-ವಿರೋಧಿ ಇಸ್ರೇಲ್ ಗುಂಪು `ಪೀಸ್ ನೌ' ಶುಕ್ರವಾರ ಪ್ರಕಟಿಸಿದ್ದು ಇದು ಮತ್ತೊಂದು ಹಾನಿಕಾರಕ ಮತ್ತು ಅನಗತ್ಯ ನಿರ್ಮಾಣ ಉಪಕ್ರಮವಾಗಿದೆ ಎಂದಿದೆ. ನೆತನ್ಯಾಹು ಸರಕಾರವು ಭವಿಷ್ಯದ ರಾಜಕೀಯ ಒಪ್ಪಂದದ ಸಾಧ್ಯತೆಯನ್ನು , ಅಮೆರಿಕ ಹಾಗೂ ಇತರ ಸ್ನೇಹಪರ ದೇಶಗಳೊಂದಿಗಿನ ನಮ್ಮ ಸಂಬಂಧವನ್ನು ತುಳಿಯುತ್ತಿದೆ ಎಂದು ಆರೋಪಿಸಿದ್ದು, ಫೆಲೆಸ್ತೀನಿಯನ್ ಪ್ರದೇಶಗಳಲ್ಲಿ 1,029 ಮನೆಗಳನ್ನು ನಿರ್ಮಿಸುವ ಟೆಂಡರ್ ಗಳನ್ನು ಸರಕಾರ ಜಾರಿಗೊಳಿಸಿದೆ ಎಂದು ಹೇಳಿದೆ.

ವಸಾಹತು ನಿರ್ಮಾಣ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವ ಪ್ರತಿಜ್ಞೆಗೆ ನೆತನ್ಯಾಹು ದ್ರೋಹ ಬಗೆದಿದ್ದಾರೆ ಮಾತ್ರವಲ್ಲ, ಅಮೆರಿಕ ಹಾಗೂ ಅಂತರಾಷ್ಟ್ರೀಯ ಪ್ರತಿಕ್ರಿಯೆಗಳಿಗೆ ಅಧಿಕೃತವಾಗಿ ನಿರ್ಲಕ್ಷ್ಯ ತೋರಿದ್ದಾರೆ. ಟೆಂಡರ್ ಗೆ ಅನುಮೋದನೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಫೆಲೆಸ್ತೀನ್ ಮತ್ತು ಇಸ್ರೇಲ್ ಮಧ್ಯೆ ಒಪ್ಪಂದಕ್ಕೆ ಬರಲಾದ ಗ್ರಹಿಕೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ    ಎಂದು ಫೆಲೆಸ್ತೀನ್ ವಿದೇಶಾಂಗ ಇಲಾಖೆ ಟೀಕಿಸಿದೆ. 

share
Next Story
X