ರಾಹುಲ್ ಗಾಂಧಿ ಅನರ್ಹತೆ: ರವಿವಾರ ಕಾಂಗ್ರೆಸ್ ನಿಂದ ದೇಶಾದ್ಯಂತ ಸತ್ಯಾಗ್ರಹ
ಹೊಸದಿಲ್ಲಿ,ಮಾ.25: ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ,ರವಿವಾರ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿಯ ಗಾಂಧಿ ಪ್ರತಿಮೆಗಳು ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ಒಂದು ದಿನದ ಸತ್ಯಾಗ್ರಹವನ್ನು ಆಚರಿಸಲಿದೆ. ಸತ್ಯಾಗ್ರಹವು ಬೆಳಿಗ್ಗೆ 10 ಗಂಟೆಗೆ ಆರಂಭಗೊಂಡು ಸಂಜೆ 5 ಗಂಟೆಗೆ ಅಂತ್ಯಗೊಳ್ಳಲಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದಿಲ್ಲಿಯ ರಾಜಘಾಟ್ನಲ್ಲಿ ಸತ್ಯಾಗ್ರಹ ನಡೆಸಲಿದ್ದಾರೆ.
Next Story