ನಟಿ ಆಕಾಂಕ್ಷಾ ದುಬೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ವಾರಣಾಸಿ: ಭೋಜ್‌ಪುರಿ ನಟಿ ಹಾಗೂ ಮಾಡೆಲ್ ಆಕಾಂಕ್ಷಾ ದುಬೆ ವಾರಣಾಸಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
25ರ ಹರೆಯದ ನಟಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯೆಂದು ಕಂಡುಬರುತ್ತಿದೆ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಬಹುದು ಎಂದೂ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story