ಮಂಗಳೂರು: ಫುಡಾರ್ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ
ಮಂಗಳೂರು, ಮಾ.26: ಕೊಂಕಣಿ ಕೆಥೋಲಿಕ್ ಸಮುದಾಯದ ‘ಫುಡಾರ್ ಪ್ರತಿಷ್ಠಾನ’ದ 2023ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ರವಿವಾರ ನಗರದ ಮಿಲಾಗ್ರಿಸ್ ಜುಬಿಲಿ ಹಾಲ್‌ನಲ್ಲಿ ನಡೆಯಿತು.
ಮಂಗಳೂರು ಮತ್ತು ಉಡುಪಿ ಧರ್ಮ ಪ್ರಾಂತಗಳ ವ್ಯಾಪ್ತಿಯಲ್ಲಿ 2021-2022ನೇ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ರ್ಯಾಂಕ್ ಗಳಿಸಿದ ಪ್ರತಿಭಾವಂತ ಕೊಂಕಣಿ ಕೆಥೋಲಿಕ್ ಸಮುದಾಯದ 216 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಮಂಗಳೂರು ಧರ್ಮ ಪ್ರಾಂತದ ಪ್ರಧಾನಗುರು ಮ್ಯಾಕ್ಸಿಮ್ ನೋರೋನ್ಹಾ ಸಭಾ ಕಾರ್ಯಕ್ರಮ ಉದ್ಘಾಟಿಸಿ ದರು. ಫುಡಾರ್ ಪ್ರತಿಷ್ಠಾ ನದ ಅಧ್ಯಕ್ಷ ಜೆರಾಲ್ಡ್ ಡಿಕೋಸ್ತ ಅಧ್ಯಕ್ಷತೆ ವಹಿಸಿದ್ದರು.
ಮುಂಬೈಯ ಕಸ್ಟಮ್ಸ್ ಮತ್ತು ಜಿಎಸ್‌ಟಿ ವಿಭಾಗದ ನಿರ್ದೇಶಕಿ ಹಾಗೂ 2022ನೇ ಸಾಲಿನ ಶೌರ್ಯ ಪ್ರಶಸ್ತಿ ವಿಜೇತ ಅಧಿಕಾರಿ ಮಿಶೆಲ್ ಕ್ವೀನಿ ಡಿಕೋಸ್ತ ಅವರನ್ನು ಸನ್ಮಾನಿಸಲಾಯಿತು.
ಕೆಥೋಲಿಕ್ ಸಭಾದ ಆಧ್ಯಾತ್ಮಿಕ ನಿರ್ದೇಶಕ ರೆ. ಫಾ. ಜೆ.ಬಿ. ಸಲ್ದಾನ್ಹಾ (ಮಂಗಳೂರು) ಮತ್ತು ರೆ. ಫಾ. ಫರ್ಡಿನಾಂಡ್ ಗೊನ್ಸಾಲ್ವಿಸ್ (ಉಡುಪಿ), ಕೆಥೋಲಿಕ್ ಸಭಾ ಅಧ್ಯಕ್ಷ ಸ್ಟಾನಿ ಲೋಬೋ, ಎಲ್.ಜೆ. ಫೆರ್ನಾಂಡಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪಾಧ್ಯಕ್ಷ ರೆ. ಫಾ.ವಾಲ್ಟರ್ ಡಿಮೆಲ್ಲೋ ಸ್ವಾಗತಿಸಿದರು.ಕೋಶಾಧಿಕಾರಿ ಎಲ್ರೊಯ್ ಕಿರಣ್ ಕ್ರಾಸ್ಟೋ ವಂದಿಸಿ ದರು. ಅರುಣ್ ಫೆರ್ನಾಂಡಿಸ್ ಮತ್ತು ವಿವಿಡ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.