Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಬಸ್ಸು ನಿಲ್ದಾಣಕ್ಕೆ 'ಕೋಟಿ...

ಪುತ್ತೂರು ಬಸ್ಸು ನಿಲ್ದಾಣಕ್ಕೆ 'ಕೋಟಿ ಚೆನ್ನಯ' ನಾಮಕರಣದಿಂದ ವೀರರ ನೆನಪಿಸುವ ಕಾರ್ಯ: ಸಂಜೀವ ಮಠಂದೂರು

26 March 2023 6:02 PM IST
share
ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣದಿಂದ ವೀರರ ನೆನಪಿಸುವ ಕಾರ್ಯ: ಸಂಜೀವ ಮಠಂದೂರು

ಪುತ್ತೂರು: ದ.ಕ. ಜಿಲ್ಲೆಯ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ಸು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಮಾನ್ಯತೆಯನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ರವಿವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ಸು ನಿಲ್ದಾಣಕ್ಕೆ `ಕೋಟಿ ಚೆನ್ನಯ' ಬಸ್ಸು ನಿಲ್ದಾಣ ನಾಮಕರಣ ಸಮಾರಂಭದಲ್ಲಿ ನಾಮಫಲಕ ಉದ್ಘಾಟಿಸಿ ಬಳಿಕ ನಡೆಸ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರಿನಲ್ಲಿ ಕಳೆದ 10 ವರ್ಷಗಳ ಹಿಂದೆ ನೂತನ ಬಸ್ಸು ನಿಲ್ದಾಣವನ್ನು ರೂ.33 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗಿತ್ತು. ಬಳಿಕದ ದಿನಗಳಲ್ಲಿ ಆಧ್ಯಾತ್ಮಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಬಸ್ಸು ನಿಲ್ದಾಣಕ್ಕೆ ನಾಮಕರಣ ಮಾಡುವ ಬಗ್ಗೆ ನಗರಸಭೆಯಿಂದ ನಿರ್ಣಯ ಅಂಗೀಕರಿಸಲಾಗಿತ್ತು. ಪುತ್ತೂರಿನ ಪಡುಮಲೆಯಲ್ಲಿ ಹುಟ್ಟಿದ ಅವಳಿ ವೀರರು ಆಗಿನ ಅವಿಭಜಿತ ಪುತ್ತೂರಿನ ಎಣ್ಮೂರಿನಲ್ಲಿ ಮರಣ ಹೊಂದಿದ್ದರು. ಅವರ ಸಾಧನೆಯನ್ನು ಅರಿಯಲು ಹಾಗೂ ಅವರನ್ನು ನೆನಪಿಸಿಕೊಳ್ಳಲು ಈ ಬಸ್ಸು ನಿಲ್ಲಾಣದ ನಾಮಕರಣವು ಪೂರಕವಾಗಿದೆ ಎಂದರು.

ಕೋಟ ಚೆನ್ನಯರು ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಹಿಂದೂ ಧರ್ಮದ ಎಲ್ಲರ ಆರಾಧಕರು. ಸರ್ಕಾರವು ಕೋಟಿ ಚೆನ್ನಯರ ಆರಾಧಕರ ಜೊತೆಗಿದೆ ಎಂಬುದಕ್ಕೆ ಕೋಟಿ ಚನ್ನಯ ನಾಮಕರಣ ಪೂರಕವಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ  ಪುತ್ತೂರಿನಲ್ಲಿ ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆಯೂ ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು. ಕೋಟಿ ಚೆನ್ನಯರ 264 ಗರಡಿಗಳಿಗೂ ಜಾಗ ಮಂಜೂರು ಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು. 

ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ಮಾತನಾಡಿ ಬಸ್ಸು ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವ ಬಗ್ಗೆ ನಗರಸಭೆಯ ಸರ್ವ ಸದಸ್ಯರ ಸಹಕಾರದಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ಶಾಸಕರ ಮುತುವರ್ಜಿ ಯಿಂದ ಮುಂದುವರಿಸಿ ಇದೀಗ ನಾಮಫಲಕ ಅನಾವರಣಗೊಳಿಸಲಾಗಿದೆ. ಪುತ್ತೂರು ಬಸ್ಸು ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇರಿಸಿರುವುದರಿಂದ ಪುತ್ತೂರು ನಗರಸಭೆಯ ಗರಿಮೆ ಹೆಚ್ಚಾಗಿದೆ ಎಂದರು. 

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ರಾಜ್ಯ ವಿದ್ಯುನ್ಯಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಯುವವಾಹಿನಿ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಲ್ಲವ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ವೇದಿಕೆಯಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ಶಿವಶಂಕರ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ ಶೆಣೈ, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಪೌರಾಯುಕ್ತ ಮಧು ಎಸ್ ಮನೋಹರ್, ಗೆಜ್ಜೆಗಿರಿ ಕ್ಷೇತ್ರಾಡಳಿತದ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಸಿ. ನಾರಾಯಣ ಉಪಸ್ಥಿತರಿದ್ದರು. 

ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಜಯಕರ ಶೆಟ್ಟಿ ಸ್ವಾಗತಿಸಿದರು. ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿ ಮುರಳೀಧರ ಆಚಾರ್ಯ ವಂದಿಸಿದರು. ರಮೇಶ್ ಶೆಟ್ಟಿ ಮತ್ತು ಮಾಧವ ಶೆಣೈ ನಿರೂಪಿಸಿದರು.

share
Next Story
X