ಮಂಗಳೂರು: ಜುಗಾರಿ ಅಡ್ಡೆಗೆ ದಾಳಿ; ಸೊತ್ತು ಸಹಿತ ಹಲವರು ವಶಕ್ಕೆ
ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ಹಲವರನ್ನು ಬಂಧಿಸಿ, ಅಪಾರ ಮೌಲ್ಯದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬೈಕಂಪಾಡಿಯ ಗುಡ್ಡ ಪ್ರದೇಶವೊಂದರಲ್ಲಿ ಜುಗಾರಿ ಆಟದಲ್ಲಿ ನಿರತರಾಗಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಪಣಂಬೂರು ಪೊಲೀಸರು, 14 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ ಆಟದಲ್ಲಿ ಪನವಾಗಿಟ್ಟಿದ್ದ 78,810 ರೂ ನಗದು, ಎರಡು ಬೈಕ್ ಗಳು, ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕ ಸೋಮಶೇಖರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು ಎಂದು ತಿಳಿದು ಬಂದಿದೆ.
Next Story