ಹೆಜಮಾಡಿ: ದಾಖಲೆ ಇಲ್ಲದ 5 ಲಕ್ಷ ರೂ. ವಶ
ಪಡುಬಿದ್ರೆ, ಮಾ.27: ಕಾರಿನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ.ವನ್ನು ಪೊಲೀಸರು ಹೆಜಮಾಡಿಯ ಚೆಕ್‌ಪೋಸ್ಟ್‌ನಲ್ಲಿ ಮಾ.26ರಂದು ಅಪರಾಹ್ನ ವೇಳೆ ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಕೈ ಚೀಲದಲ್ಲಿ 500 ರೂ. ಮುಖಬೆಲೆಯ ಒಟ್ಟು 5 ಲಕ್ಷ ರೂ. ಕಂಡುಬಂದಿದೆ. ಈ ಬಗ್ಗೆ ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿದ್ದ ಅಬ್ದುಲ್ ಖಾದರ್ ಜೈಲಾನಿ ಎಂಬವರನ್ನು ವಿಚಾರಿಸಿದಾಗ ದಾಖಲಾತಿಗಳನ್ನು ಹಾಜರುಪಡಿಸಿರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ನಗದು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story