ಉಪ್ಪಿನಂಗಡಿ: ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ.
ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
Next Story