Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿ ಹಣ ಕಳಿಸಿದ್ದಾರೆಂದು...

ಪ್ರಧಾನಿ ಮೋದಿ ಹಣ ಕಳಿಸಿದ್ದಾರೆಂದು ನಂಬಿದ್ದೆ: ಬ್ಯಾಂಕ್ ತಪ್ಪಿನಿಂದ ರೂ. 1 ಲಕ್ಷ ಪಡೆದ ಬೀಡಿ ಕಾರ್ಮಿಕ ಜೈಲು ಪಾಲು!

28 March 2023 4:42 PM IST
share
ಪ್ರಧಾನಿ ಮೋದಿ ಹಣ ಕಳಿಸಿದ್ದಾರೆಂದು ನಂಬಿದ್ದೆ: ಬ್ಯಾಂಕ್ ತಪ್ಪಿನಿಂದ ರೂ. 1 ಲಕ್ಷ ಪಡೆದ ಬೀಡಿ ಕಾರ್ಮಿಕ ಜೈಲು ಪಾಲು!

ಸಿಂಗ್ಭುಮ್: ರೂ. ಒಂದು ಲಕ್ಷಕ್ಕೂ ಹೆಚ್ಚು ಮೊತ್ತ ಹೊಂದಿದ್ದ ಬ್ಯಾಂಕ್ ಖಾತೆಯು ತನ್ನ ಆಧಾರ್ ನಂಬರ್‌ಗೆ ತಪ್ಪಾಗಿ ಜೋಡಣೆಯಾಗಿದ್ದರಿಂದ ಜೀತ್ರಾಯ್ ಸಮಂತ್ ಎಂಬ ಬೀಡಿ ಕಾರ್ಮಿಕನ ಜೈಲು ಶಿಕ್ಷೆಗೆ ಕಾರಣವಾದ ಘಟನೆ ನಡೆದಿದೆ ಎಂದು indianexpress.com ವರದಿ ಮಾಡಿದೆ.

42 ವರ್ಷದ ಬೀಡಿ ಕಾರ್ಮಿಕನಾದ ಜೀತ್ರಾಯ್ ಸಮಂತ್ ಎಂಬ ಝಾರ್ಖಂಡ್ ರಾಜ್ಯದ ಸಿಂಗ್ಭುಮ್ ಜಿಲ್ಲೆಗೆ ಸೇರಿದ ವ್ಯಕ್ತಿಯ ಆಧಾರ್ ಸಂಖ್ಯೆಗೆ ಮಹಿಳೆಯೊಬ್ಬರ ಬ್ಯಾಂಕ್ ಖಾತೆ ತಪ್ಪಾಗಿ ಜೋಡಣೆಯಾಗಿದ್ದು, ಆ ಖಾತೆಯಲ್ಲಿದ್ದ ಹಣವನ್ನು ತೆಗೆದ ಕಾರಣಕ್ಕೆ ರಾಜ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ. ದೇಶಾದ್ಯಂತ ಕೋವಿಡ್ ಸಾಂಕ್ರಾಮಿಕ ಆವರಿಸಿದ್ದಾಗ ತನ್ನ ಬ್ಯಾಂಕ್ ಖಾತೆಯಲ್ಲಿ ರೂ. ಒಂದು ಲಕ್ಷಕ್ಕೂ ಹೆಚ್ಚು ಮೊತ್ತವಿರುವ ಸಂಗತಿ ನಾಗರಿಕ ಸೇವಾ ಕೇಂದ್ರದ ಮೂಲಕ ಸಮಂತ್ ಅರಿವಿಗೆ ಬಂದಿತ್ತು. ದೇಶಾದ್ಯಂತ ಗ್ರಾಮೀಣ ಭಾಗ ಹಾಗೂ ತೀರ ದೂರವಿರುವ ಪ್ರದೇಶಗಳಲ್ಲಿ ಈ ನಾಗರಿಕ ಸೇವಾ ಕೇಂದ್ರಗಳು ಅಗತ್ಯ ಸಾರ್ವಜನಿಕ ಸೇವೆಗಳು, ಕಲ್ಯಾಣ ಯೋಜನೆಗಳು ಇತ್ಯಾದಿಗಳನ್ನು ಒದಗಿಸುತ್ತವೆ. ಪ್ರಕರಣದ ತನಿಖೆಯ ಬಗ್ಗೆ ಮಾಹಿತಿ ಹೊಂದಿರುವ ಮೂಲಗಳ ಪ್ರಕಾರ, ಈ ನಾಗರಿಕ ಕೇಂದ್ರವು ಫಲಾನುಭವಿಗಳು ತಮ್ಮ ಖಾತೆಯಿಂದ ಹಣ ತೆಗೆಯಲು ಬ್ಯಾಂಕ್ ಪ್ರತಿನಿಧಿಯೊಬ್ಬರನ್ನು ತನ್ನ ಜೊತೆಗಿಟ್ಟುಕೊಂಡಿತ್ತು.

ತನ್ನ ಖಾತೆಯಿಂದ ಹಣ ಕಾಣೆಯಾಗಿದೆ ಎಂದು ಶ್ರಿಮತಿ ಲಾಗೂರಿ ಎಂಬ ಮಹಿಳೆ ಝಾರ್ಖಂಡ್ ರಾಜ್ಯ ಗ್ರಾಮೀಣ ಬ್ಯಾಂಕ್‌ನ ವ್ಯವಸ್ಥಾಪಕರಿಗೆ ದೂರು ನೀಡಿದ್ದರಿಂದ ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ಸಮಂತ್ ಕಾನೂನಿನ ಬಲೆಗೆ ಬಿದ್ದಿದ್ದಾನೆ. ಈ ಕುರಿತು ವ್ಯವಸ್ಥಾಪಕರು ಪ್ರಾಧಿಕಾರಕ್ಕೆ ಪತ್ರ ಬರೆದಾಗ, ನಡೆದಿರುವ ತಪ್ಪು ಬೆಳಕಿಗೆ ಬಂದಿದೆ. ನಂತರ ವ್ಯವಸ್ಥಾಪಕರು ಸಮಂತ್‌ನಿಗೆ ಹಣ ಹಿಂದಿರುಗಿಸುವಂತೆ ಸೂಚಿಸಿದ್ದಾರೆ. ಆದರೆ, ಆತ ಹಣ ಹಿಂದಿರುಗಿಸಲು ವಿಫಲನಾಗಿದ್ದರಿಂದ ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ನಂಬಿಕೆ ದ್ರೋಹ), ಹಾಗೂ ಸೆಕ್ಷನ್ 420 (ವಂಚನೆ) ಅಡಿ ಸಿಂಗ್ಭುಮ್ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್, "ಮಾರ್ಚ್ 24ರಂದು ಸಮಂತ್‌ನನ್ನು ಬಂಧಿಸಲಾಯಿತು. ಬೇರೊಬ್ಬರ ಬ್ಯಾಂಕ್ ಖಾತೆಗೆ ಆತನ ಆಧಾರ್ ಕಾರ್ಡ್ ಅನ್ನು ತಪ್ಪಾಗಿ ಜೋಡಿಸಲಾಗಿತ್ತು. ಆದರೆ, ಆತ ಹಣವನ್ನು ಹಿಂದಿರುಗಿಸಲಿಲ್ಲ. ಪೊಲೀಸರು ಈ ಕುರಿತು ನೋಟಿಸ್ ಜಾರಿ ಮಾಡಿದಾಗ ತನ್ನ ಗುರುತು ತಿಳಿಸದಂತೆ ಆತ ನಾಗರಿಕ ಸೇವಾ ಕೇಂದ್ರದ ನಿರ್ವಾಹಕನಿಗೆ ಲಂಚ ನೀಡಿದ್ದ. ಆತ ನಮಗೆ ಪತ್ರ ಬರೆದು, 'ಪ್ರಧಾನಿ ನರೇಂದ್ರ ಮೋದಿ ನನಗೆ ದುಡ್ಡು ಕಳಿಸಿದ್ದಾರೆ ಎಂದು ನಂಬಿದ್ದೆ' ಎಂದು ಹೇಳಿಕೊಂಡಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

"ಈ ಮುನ್ನ ಗ್ರಾಮೀಣ ಬ್ಯಾಂಕ್ ಅನ್ನು ಬ್ಯಾಂಕ್ ಆಫ್ ಇಂಡಿಯಾ ಪ್ರಾಯೋಜಿಸುತ್ತಿತ್ತು. ಬ್ಯಾಂಕ್ ವಿಲೀನವಾದಾಗ  ಏಪ್ರಿಲ್ 2019ರಂದು ಅದರ ಸಂಪೂರ್ಣ ದತ್ತಾಂಶ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನವಾಯಿತು. ಈ ಪ್ರಕ್ರಿಯೆಯಲ್ಲಿ ಸಮಂತ್‌ನ ಆಧಾರ್ ಕಾರ್ಡ್ ಸಂಖ್ಯೆ ಆಕಸ್ಮಿಕವಾಗಿ ಬೇರೆ ವ್ಯಕ್ತಿಯ ಬ್ಯಾಂಕ್ ಖಾತೆಗೆ ಜೋಡಣೆಯಾಗಿದೆ. ಆ ಮಹಿಳೆಯು ಈ ಕುರಿತು ಕೂಡಲೇ ದೂರು ನೀಡಿರಲಿಲ್ಲ. ಇಲ್ಲವಾಗಿದ್ದರೆ, ಈ ತಪ್ಪನ್ನು ತಡೆಯಬಹುದಾಗಿತ್ತು. ಕೇವಲ ಒಬ್ಬ ಬ್ಯಾಂಕ್ ಅಧಿಕಾರಿಯ ವಿರುದ್ಧ ಈ ತಪ್ಪನ್ನು ಹೊರಿಸುವುದು ಕಷ್ಟವಾಗುತ್ತದೆ" ಎಂದು ಬ್ಯಾಂಕ್ ವ್ಯವಸ್ಥಾಪಕ ಮನೀಶ್ ಕುಮಾರ್  indianexpress.com ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಹೆಸರೇಳಲಿಚ್ಛಿಸದ ಯುಐಡಿಎಐ ಅಧಿಕಾರಿಯೊಬ್ಬರ ಪ್ರಕಾರ, "ಇದು ಸ್ಪಷ್ಟವಾಗಿ ಬ್ಯಾಂಕ್‌ನ ತಪ್ಪಾಗಿದೆ. ಈ ತಪ್ಪಿನಲ್ಲಿ ಯುಐಡಿಎಐನ ಯಾವುದೇ ಪಾತ್ರವಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಕ್ಷಮೆ ಕೋರದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಎಚ್ಚರಿಕೆ

share
Next Story
X