ಬಿಜೆಪಿ ಶಾಸಕರಿಗೆ ಡಿಕೆಶಿ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ: ಸಿಎಂ ಬೊಮ್ಮಾಯಿ ಆರೋಪ
ಬೆಳಗಾವಿ, ಮಾ.28: 'ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕಳೆದ 2-3 ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೆ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದಿವಾಳಿಯಾಗಿದೆ ಎಂದು ಇದರಿಂದಾಗಿ ಸ್ಪಷ್ಟವಾಗುತ್ತದೆ ಎಂದರು.
'ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಪಟ್ಟಿ'
ಬಿಜೆಪಿ ಪಟ್ಟಿ ಬಹುತೇಕವಾಗಿ ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ಇದೇ ವೇಳೆ ತಿಳಿಸಿದರು.
Next Story