ಸರಕಾರಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಲು ಎಸ್ಎಫ್ಐ ಮನವಿ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಎಸ್ಎಫ್ಐ ದ.ಕ.ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ಜಿಲ್ಲೆಯು ರಾಜ್ಯದ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಜಿಲ್ಲೆಯನ್ನು ಅವಲಂಬಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಖಾಸಗಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿದ್ದರೂ ಒಂದೇ ಒಂದು ಸರಕಾರಿ ವೈದ್ಯಕೀಯ ಹಾಗೂ ಮೆಡಿಕಲ್ ಕಾಲೇಜು ಇಲ್ಲ. ಇದರಿಂದ ವೈದ್ಯರು, ಇಂಜಿನಿಯರ್ ಅಗುವ ಕನಸುಕಂಡಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಸರಕಾರಿ ಮಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಗಾಗಿ ಸರಕಾರ ಮುಂದಾಗಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದ.ಕ. ಜಿಲ್ಲಾ ಸಮಿತಿಯು ಒತ್ತಾಯಿಸಿದೆ.
ಎಸ್ಎಫ್ಐ ದ.ಕ.ಜಿಲ್ಲಾ ಕಾರ್ಯದರ್ಶಿ ರೇವಂತ್ ಕದ್ರಿ, ನಗರ ಅಧ್ಯಕ್ಷ ಶಾಹಿದ್ ಅಫ್ರಿದ್, ಜಿಲ್ಲಾ ನಾಯಕರಾದ ಸ್ಟಾನಿ ಪ್ರೀತಂ, ಸುಪ್ರಿಯಾ, ರೇಣುಕಾ, ಮಾಹಿರ್ ನಿಯೋಗದಲ್ಲಿದ್ದರು.