Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮತದಾನ ಕುರಿತು ಅರಿವು ಮೂಡಿಸಲು ಮತದಾರರ...

ಮತದಾನ ಕುರಿತು ಅರಿವು ಮೂಡಿಸಲು ಮತದಾರರ ಜಾಗೃತಿ ವೇದಿಕೆ: ಉಡುಪಿ ಸಿಇಓ ಪ್ರಸನ್ನ ಎಚ್

28 March 2023 2:58 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮತದಾನ ಕುರಿತು ಅರಿವು ಮೂಡಿಸಲು ಮತದಾರರ ಜಾಗೃತಿ ವೇದಿಕೆ: ಉಡುಪಿ ಸಿಇಓ ಪ್ರಸನ್ನ ಎಚ್

ಉಡುಪಿ, ಮಾ.28: ಮತದಾರರು ಮತಗಟ್ಟೆಗಳಿಗೆ ತೆರಳಿ,  ಮತದಾನ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ಭಾಗವಹಿಸಲು ಪ್ರೋತ್ಸಾಹಿಸುವ ಸಲುವಾಗಿ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಜಾಗೃತ ವೇದಿಕೆಯನ್ನು ಸ್ಥಾಪಿಸಲಾಗಿದ್ದು, ಕಚೇರಿಯ ಮುಖ್ಯಸ್ಥರು ಇದರ ಅಧ್ಯಕ್ಷ ರಾಗಿದ್ದು, ಉಳಿದ ಸಿಬ್ಬಂದಿಗಳು ಸದಸ್ಯರಾಗಿರುತ್ತಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲೆಯ ಸ್ವೀಪ್ ಸಮಿತಿಯ ಅಧ್ಯಕ್ಷ ಪ್ರಸನ್ನ ಹೆಚ್. ಹೇಳಿದ್ದಾರೆ.  

ಮಂಗಳವಾರ ಮತದಾರರ ಜಾಗೃತಿ ವೇದಿಕೆಗಳ ಸದಸ್ಯರಿಗೆ ಆನ್‌ಲೈನ್ ವೆಬಿನಾರ್ ಮೂಲಕ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. 

ಜಿಲ್ಲೆಯಲ್ಲಿ ಕಳೆದ ಸಾಲಿಗಿಂತ ಶೇ.10ರಷ್ಟು ಹೆಚ್ಚು ಮತದಾನ ನಡೆಯ ಬೇಕು ಎಂಬ ಗುರಿಯೊಂದಿಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ  ಕಾರ್ಯಕ್ರಮಗಳ ಮೂಲಕ ಜಾಗೃತಿ ಮತ್ತು ಅರಿವು ಮೂಡಿಸಲಾಗುತ್ತಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮಾಹಿತಿಯ ಕೊರತೆಯಿಂದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದಿರುವವರಿಗೆ, ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ, ಅವರ ಮತಗಟ್ಟೆಯ ವಿಳಾಸ, ಮತದಾನ ಪ್ರಕ್ರಿಯೆ ಕುರಿತು ಅರಿವು ಮೂಡಿಸಬೇಕು ಎಂದರು.

ಮತದಾನ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆಗೊಳಿಸುವುದು ನಿರಂತರ ವಾಗಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯವರೆಗೂ ಹೆಸರಿನ ಸೇರ್ಪಡೆಗೆ ಅವಕಾಶವಿದೆ.ಇದನ್ನು ಮೊಬೈಲ್ ಆಪ್ ಮೂಲಕ ಕೂಡ ಮಾಡಬಹುದಾಗಿದೆ. ಬೂತ್ ಮಟ್ಟದಲ್ಲಿ ಮತಗಟ್ಟೆ ಜಾಗೃತ ಸದಸ್ಯರು ಮತದಾನ ಕುರಿತು ಜಾಗೃತಿ ಮೂಡಿಸುವುದರಿಂದ ಮತದಾನ ಪ್ರಮಾಣ ಹೆಚ್ಚಿಸಲು ಸಾಧ್ಯ ಎಂದರು.

ತರಬೇತಿ ನೀಡಿದ ತೋಟಗಾರಿಕೆ ಇಲಾಖೆಯ ಅಧಿಕಾರಿ ಶಾಂತ ಮಾತನಾಡಿ, ಭಾರತೀಯ ನಾಗರೀಕರಾದ ನಾವು ಮತದಾನ ಮಾಡುವುದು ಸಂಧಾನಬದ್ದ ಹಕ್ಕಾಗಿದ್ದು, ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಎಲ್ಲರೂ ಮತದಾನ ಮಾಡಬೇಕು. ಭಾರತೀಯ ಚುನಾವಣಾ ಆಯೋಗವು ಮತದಾನ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮವನ್ನು ರೂಪಿಸಿ, ಇದರ ಮೂಲಕ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಈವರೆಗೆ ಆಯೋಜಿಸುತ್ತಾ ಬಂದಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಚುನಾವಣೆಯ ಮಹತ್ವವನ್ನು ಅರಿತು ಮತಗಟ್ಟೆಗೆ ತೆರಳಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರೀಕ್ಷಿಸಿಕೊಳ್ಳಲು ವೋಟರ್ ಹೆಲ್ಪ್‌ಲೈನ್ ಮೊಬೈಲ್ ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಗೂಗಲ್ ಪ್ಲೇಸ್ಟೋರ್‌ನಲ್ಲಿ ವೋಟರ್ ಹೆಲ್ಪ್‌ಲೈನ್ ಆಪ್ ಅನ್ನು ಡೌನ್‌ಲೋಡ್ ಮಾಡಿ ಕೊಂಡು ಇದರಲ್ಲಿ ನೋಂದಣಿ ಆಗದೇ ಇರುವ 18 ವರ್ಷ ಮೇಲ್ಪಟ್ಟವರು ನೋಂದಣಿ ಮಾಡಿಕೊಳ್ಳಬಹುದು, ನೋಂದಣಿ ಆದ ಮತದಾರರು ನೋಂದಣಿ ಸಂಖ್ಯೆ ನಮೂದಿಸಿದ್ದಲ್ಲಿ ಮತಗಟ್ಟೆಗಳ ವಿವರ ಪಡೆಯ ಬಹುದಾಗಿದೆ. ಹೆಸರು, ತಿದ್ದುಪಡಿ, ಸೇರ್ಪಡೆ, ಮತಗಟ್ಟೆಗಳ ವಿವರ, ತಮ್ಮ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದ ದೂರು ಗಳನ್ನು ಕೂಡ ಇದರಲ್ಲಿ ದಾಖಲಿಸಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಿ ದವರಿಗೆ ಚುನಾವಣಾ ಗುರುತಿನ ಚೀಟಿ ಇಲ್ಲದಿದ್ದರೂ 15 ದಾಖಲಾತಿಗಳಲ್ಲಿ ಒಂದನ್ನು ತೋರಿಸಿ, ಮತದಾನ ಮಾಡಬಹುದು ಎಂದರು.

ಆನ್‌ಲೈನ್ ವೆಬಿನಾರ್ ತರಬೇತಿಯಲ್ಲಿ, ಮಾಸ್ಟರ್ ಟ್ರೈನಿ ಅಶೋಕ್ ಕಾಮತ್, ವಿವಿಧ ಕಚೇರಿಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ವಿವಿಧ ಶಾಲೆಗಳ ಶಿಕ್ಷಕರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X